ಪಟ್ನಾ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 15ನೇ ಬಾರಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ ಬಿಹಾರದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ನಿತೀಶ್ ಕುಮಾರ್ ಪಾತ್ರರಾಗಿದ್ದಾರೆ.

ಈ ಸಂಬಂಧ ಟ್ವೀಟ್ ಮೂಲಕ ಖುಷಿ ಹಂಚಿಕೊಂಡಿರುವ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಸಂಜಯ್ ಝಾ, ನಿತೀಶ್ ಕುಮಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿಯೇ ತಮ್ಮ ಅಧಿಕಾರವಧಿಯ 5,474 ದಿನಗಳನ್ನು ಪೂರೈಸಿದ್ದಾರೆ ಎಂದು ತಿಳಿಸಿದ್ದಾರೆ.

‘ನಿತೀಶ್ ಕುಮಾರ್ ಅವರ ಆಡಳಿತ ಜನರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿದೆ. ಬಿಹಾರವೂ ಪ್ರಗತಿ ಸಾಧಿಸಬಹುದು ಎಂಬ ಮನಃಸ್ಥಿತಿಯನ್ನು ಮೂಡಿಸಿದೆ. ಮುಖ್ಯಮಂತ್ರಿ ಅವರ ನಿರ್ಧಾರಗಳಿಗೆ ಬೆಂಬಲ ನೀಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನಾವು ದೃಢ ನಿಶ್ಚಯ ಮಾಡೋಣ’ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ 1961ರವರೆಗೆ ಮುಖ್ಯಮಂತ್ರಿಯಾಗಿದ್ದ ಶ್ರೀಕೃಷ್ಣ ಸಿನ್ಹಾ ಅವರ ಹೆಸರಲ್ಲಿ ಇದುವರೆಗಿನ ದಾಖಲೆ ಇತ್ತು.

ಅರಿವಿನಾಚೆ ಅರಳಿದ ದೇಶಭಕ್ತಿ: ಕೂಲಿ ಕಾರ್ಮಿಕ ಮಹಿಳೆಯ ಧ್ವಜ ವಂದನೆಗೆ ಮೆಚ್ಚುಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.