ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಭೇಟಿಯಾಗಲಿರುವ ನಿತೀಶ್, ಲಾಲು: ವಿರೋಧ ಪಕ್ಷಗಳ ಒಗ್ಗೂಡಿಸುವ ಬಗ್ಗೆ ಚರ್ಚೆ?

Last Updated 25 ಸೆಪ್ಟೆಂಬರ್ 2022, 5:36 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಭಾನುವಾರ ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಮತ್ತು 2024ರ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸುವ ಸಾಧ್ಯತೆಯಿದೆ.

2024ರಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಕೈಗೊಂಡಿರುವ ಉಪಕ್ರಮಗಳ ಕುರಿತು ಉಭಯ ನಾಯಕರು ಕಾಂಗ್ರೆಸ್ ನಾಯಕಿಗೆ ವಿವರಿಸಲಿದ್ದಾರೆ.

ನಿತೀಶ್ ಅವರು ಹಿಂದಿನ ದೆಹಲಿ ಪ್ರವಾಸದಲ್ಲಿ ರಾಹುಲ್ ಗಾಂಧಿ, ಶರದ್ ಪವಾರ್, ಅರವಿಂದ್ ಕೇಜ್ರಿವಾಲ್ ಮತ್ತು ಸೀತಾರಾಂ ಯೆಚೂರಿ ಅವರನ್ನು ಭೇಟಿ ಮಾಡಿದ್ದರು.

ಹರಿಯಾಣದಲ್ಲಿ ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ವಿರೋಧ ಪಕ್ಷದ ನಾಯಕರು ಒಟ್ಟಿಗೆ ಸೇರುತ್ತಿರುವುದರ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ ನಿರ್ನಾಮವಾಗಲಿದೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಶನಿವಾರ ಹೇಳಿದ್ದಾರೆ.

ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿದ್ದ ಲಾಲು ಪ್ರಸಾದ್ ಕಳೆದ ತಿಂಗಳು ಪಾಟ್ನಾಕ್ಕೆ ಮರಳಿದ್ದರು. ಅವರು ಸೋಮವಾರ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ತೆರಳಲಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT