ಸೋಮವಾರ, ಅಕ್ಟೋಬರ್ 3, 2022
25 °C

24ರಂದು ವಿಶ್ವಾಸಮತ ಯಾಚಿಸಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಪಟ್ನಾ: ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಆಗಸ್ಟ್‌ 24ರಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.

ಇದನ್ನೂ ಓದಿ: 

ಬಿಜೆಪಿಯೊಂದಿಗಿನ ಸ್ನೇಹ ಕಡಿದುಕೊಂಡಿರುವ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರು ಎನ್‌ಡಿಎಯಿಂದ ಹೊರಬಂದು ಆರ್‌ಜೆಡಿ, ಕಾಂಗ್ರೆಸ್‌ ಮತ್ತು ಇತರ ಪಕ್ಷಗಳೊಂದಿಗೆ ಮಹಾಘಟಬಂಧನ ಸರ್ಕಾರ ರಚಿಸಿದ್ದಾರೆ.

ಬುಧವಾರ (ಆ. 10) ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿಯ ತೇಜಸ್ವಿ ಯಾದವ್‌ ಅವರು ನೂತನ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಅದರಂತೆ ಆ. 24ಕ್ಕೆ ವಿಶ್ವಾಸಮತ ಯಾಚನೆ ನಿಗದಿಯಾಗಿದೆ. 165ಕ್ಕಿಂತಲೂ ಹೆಚ್ಚು ಸದಸ್ಯರ ಬಲ ಹೊಂದಿರುವ ಮಹಾಘಟಬಂಧನ ಸರ್ಕಾರ ಅನಾಯಾಸವಾಗಿ ಬಹುಮತ ಸಾಬೀತುಗೊಳಿಸುವುದು ನಿಚ್ಚಳವಾಗಿದೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು