ಸೋಮವಾರ, ಸೆಪ್ಟೆಂಬರ್ 26, 2022
24 °C
ಉಪ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್‌

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ: ತೇಜಸ್ವಿ ಡಿಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್  8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಎರಡನೇ ಬಾರಿಗೆ ಆರ್‌ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾದರು.

ಪ್ರಮಾಣವಚನ ಸಮಾರಂಭದಲ್ಲಿ ತೇಜಸ್ವಿ ಯಾದವ್ ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ, ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.

ನಿನ್ನೆ ಬಿಜೆಪಿ ಜೊತೆ ಮೈತ್ರಿ ಕಡಿದುಕೊಂಡು ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬುಧವಾರ ಮಹಾಘಟಬಂಧನ್‌ ಸರ್ಕಾರದ ಮುಖ್ಯಮಂತ್ರಿಯಾದರು. ಅವರು 8ನೇ ಬಾರಿಗೆ ಸಿಎಂ ಆಗಿರುವುದು ವಿಶೇಷ.

ಇವನ್ನೂ ಓದಿ: 

 ಮತ್ತೆ ಎನ್‌ಡಿಎ ತೊರೆದ ನಿತೀಶ್‌: ಸಿ.ಎಂ ಆಗಿ ಇಂದು ಪ್ರಮಾಣ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು