ಸೋಮವಾರ, ಸೆಪ್ಟೆಂಬರ್ 26, 2022
23 °C

ಬಿಹಾರ ವಿಧಾನಸಭೆಯಲ್ಲಿ ರಾಜಕೀಯ ಪಕ್ಷಗಳ ಬಲಾಬಲ: ಇಲ್ಲಿದೆ ಮಾಹಿತಿ

ಪ್ರಜಾವಾಣಿ ವೆಬ್ ಡೆ‌ಸ್ಕ್ Updated:

ಅಕ್ಷರ ಗಾತ್ರ : | |

ಪಟ್ನಾ: ಎನ್‌ಡಿಎ ಜತೆಗಿನ ಮೈತ್ರಿಯನ್ನು ಕಡಿದುಕೊಂಡಿರುವ ಜೆಡಿ(ಯು) ವರಿಷ್ಠ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಜೆಡಿ(ಯು) ಪಕ್ಷದ ಎಲ್ಲ ಸಂಸದರು, ಶಾಸಕರು ಹಾಗೂ ನಾಯಕರ ಸಮ್ಮತಿಯೊಂದಿಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಅವರು, ಆರ್‌ಜೆಡಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಜತೆಗೂಡಿ ಸರ್ಕಾರ ರಚಿಸುವುದು ಬಹುತೇಕ ಖಚಿತಗೊಂಡಿದೆ.

ಬಿಹಾರ ವಿಧಾನಸಭೆಯಲ್ಲಿ ಪ್ರಸ್ತುತ ಪಕ್ಷಗಳ ಸಂಖ್ಯಾಬಲ ಹೀಗಿದೆ;

ಬಿಹಾರ ವಿಧಾನಸಭೆಯ ಒಟ್ಟು ಸ್ಥಾನ – 243
ಬಹುಮತಕ್ಕೆ ಬೇಕಿರುವ ಸ್ಥಾನ – 122

ಆರ್‌ಜೆಡಿ – 79
ಬಿಜೆಪಿ – 77
ಜೆಡಿ(ಯು) – 45
ಕಾಂಗ್ರೆಸ್‌ – 19
ಸಿಪಿಐ – 2
ಸಿಪಿಐ(ಎಂ–ಎಲ್) – 12
ಸಿಪಿಎಂ – 2
ಎಚ್‌ಎಎಂ – 4
ಎಐಎಂಐಎಂ – 1
ಸ್ವತಂತ್ರ – 1
ತೆರವಾಗಿರುವ ಸ್ಥಾನ – 1

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು