ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್ ಕುಮಾರ್‌ ಆಪ್ತ ಆರ್‌ಸಿಪಿ ಸಿಂಗ್ ಜೆಡಿಯು ಹೊಸ ಅಧ್ಯಕ್ಷ

Last Updated 27 ಡಿಸೆಂಬರ್ 2020, 11:40 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರಾದ ಆರ್‌ಸಿಪಿ ಸಿಂಗ್ (ರಾಮಚಂದ್ರ ಪ್ರಸಾದ್ ಸಿಂಗ್) ಅವರು ಜನತಾ ದಳದ (ಸಂಯುಕ್ತ) ರಾಷ್ಟ್ರೀಯ ಘಟಕದ ಅಧ್ಯಕ್ಷರಾಗಿ ಭಾನುವಾರ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸಿಂಗ್ ಅವರ ಹೆಸರನ್ನು ನಿತೀಶ್ ಅವರೇ ಸೂಚಿಸಿದ್ದರು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಇತರ ಸದಸ್ಯರು ಅದನ್ನು ಅನುಮೋದಿಸಿದರು ಎಂದು ಜೆಡಿಯು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ರಾಜಕಾರಣ ಪ್ರವೇಶಿಸುವ ಮುನ್ನ ಆರ್‌ಸಿಪಿ ಸಿಂಗ್ ಅವರು ಸರ್ಕಾರಿ ಅಧಿಕಾರಿಯಾಗಿದ್ದರು. ರಾಜಕೀಯ ಪ್ರವೇಶಿಸಿದ ಬಳಿಕ ಅವರು ಜೆಡಿಯು ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.

ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಏಳು ಶಾಸಕರ ಪೈಕಿ ಇತ್ತೀಚೆಗೆ ಆರು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವಿಷಯ ಸೇರಿದಂತೆ ದೇಶದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಪಕ್ಷವು ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಸಿದೆ. ಪಶ್ಚಿಮ ಬಂಗಾಳದ ಚುನಾವಣೆಯ ವಿಷಯವನ್ನೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹಿರಿಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

2019ರಲ್ಲಿ ಜೆಡಿಯು ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿಗೆ ನಿತೀಶ್‌ ಮರು ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT