ಶನಿವಾರ, ನವೆಂಬರ್ 28, 2020
26 °C
ಎನ್‌ಡಿಎ ನಾಯಕನಾಗಿ ಆಯ್ಕೆ: ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಬಿಹಾರ: ನಿತೀಶ್‌ ಕುಮಾರ್‌ ಮತ್ತೆ ಮುಖ್ಯಮಂತ್ರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಬಿಹಾರದಲ್ಲಿ ಎನ್‌ಡಿಎ ನಾಯಕರಾಗಿ ನಿತೀಶ್‌ ಕುಮಾರ್‌ ಅವರನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಲಾಗಿದೆ. ಇದರಿಂದಾಗಿ, ಸತತ ನಾಲ್ಕನೇ ಬಾರಿ ನಿತೀಶ್ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿಯಾಗಲಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಸುಶೀಲ್‌ ಕುಮಾರ್‌ ಮೋದಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಮತ್ತೊಮ್ಮೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಕಟಿಹಾರ್‌ ಶಾಸಕ ತಾರ್ ಕಿಶೊರ್ ಪ್ರಸಾದ್‌ ಅವರನ್ನು ವಿಧಾನಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ನಿತೀಶ್‌ ಕುಮಾರ್‌ ಅವರು ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚಿಸುವ ಹಕ್ಕು ಪ್ರತಿಪಾದಿಸಲಿದ್ದಾರೆ. ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು