ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಉಕ್ರೇನ್‌ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು ಇಲ್ಲೇ ಇಂಟರ್ನ್‌ಷಿಪ್‌ ಮಾಡಬಹುದು'

Last Updated 5 ಮಾರ್ಚ್ 2022, 11:10 IST
ಅಕ್ಷರ ಗಾತ್ರ

ನವದೆಹಲಿ: ಉಕ್ರೇನ್‌ ಬಿಕ್ಕಟ್ಟು ಅಥವಾ ಕೋವಿಡ್‌ 19ರ ಕಾರಣದಿಂದ ಬಾಕಿಯಾಗಿರುವ ವಿದೇಶಿ ವೈದ್ಯಕೀಯ ಪದವೀದರರಿಗೆ ಭಾರತದಲ್ಲಿ ಇಂಟರ್ನ್‌ಷಿಪ್‌ ಪೂರ್ಣಗೊಳಿಸಲು ಅವಕಾಶ ನೀಡುವುದಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ತಿಳಿಸಿದೆ.

ಭಾರತದಲ್ಲಿ ಇಂಟರ್ನ್‌ಷಿಪ್‌ ಪೂರ್ಣಗೊಳಿಸಲು ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಅದನ್ನೇ ರಾಜ್ಯ ವೈದ್ಯಕೀಯ ಕೌನ್ಸಿಲ್‌ಗಳು ಪರಿಗಣಿಸಬಹುದು ಎಂದು ಎನ್‌ಎಂಸಿ ಸುತ್ತೋಲೆಯಲ್ಲಿ ತಿಳಿಸಿದೆ.

'ಕೋವಿಡ್‌ 19 ಅಥವಾ ಯುದ್ಧ ಮುಂತಾದ ಕಾರಣಗಳಿಂದ ಇಂಟರ್ನ್‌ಷಿಪ್‌ ಪೂರ್ಣಗೊಳಿಸಲು ಸಾಧ್ಯವಾಗದೇ ಇರುವ ಕೆಲವು ವಿದೇಶಿ ವೈದ್ಯಕೀಯ ಪದವೀದರರು ಇದ್ದಾರೆ. ಅಂತಹ ವಿದ್ಯಾರ್ಥಿಗಳು ಇಂಟರ್ನ್‌ಷಿಪ್‌ಅನ್ನು ಭಾರತದಲ್ಲಿ ಪೂರ್ಣಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲಾಗುವುದು' ಎಂದು ಎಎಂಸಿ ತಿಳಿಸಿದೆ. ಇದಕ್ಕೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದೂ ಹೇಳಿದೆ.

ಇದರಿಂದ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಅನ್ನು ಸ್ಥಳೀಯವಾಗಿ ಖಾಸಗಿ ಕಾಲೇಜುಗಳಲ್ಲಿ ಪೂರ್ಣಗೊಳಿಸಲು ಸಹಕಾರಿಯಾಗಲಿದೆ.

ರಾಷ್ಟೀಯ ಪರೀಕ್ಷಾ ಮಂಡಳಿ ನಡೆಸುವ ವಿದೇಶಿ ವೈದ್ಯಕೀಯ ಅರ್ಹತಾ ಪರೀಕ್ಷೆ(ಎಫ್‌ಎಂಜಿಇ)ಯನ್ನು ಅಭ್ಯರ್ಥಿಗಳು ಪೂರ್ಣಗೊಳಿಸಿರುವುದನ್ನು ರಾಜ್ಯ ವೈದ್ಯಕೀಯ ಕೌನ್ಸಿಲ್‌ಗಳು ಖಾತರಿ ಪಡಿಸಿಕೊಳ್ಳಬೇಕು. ಅಭ್ಯರ್ಥಿಯು ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿದ್ದರೆ 12 ತಿಂಗಳ ಇಂಟರ್ನ್‌ಷಿಪ್‌ ಅಥವಾ ಉಳಿದ ಅವಧಿಯನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಎನ್‌ಎಂಸಿ ಹೇಳಿದೆ.

ವಿದೇಶಿ ವೈದ್ಯಕೀಯ ವಿದ್ಯಾರ್ಥಿಗಳಿಗೂ ತರಬೇತಿ ಭತ್ಯೆ ಮತ್ತು ಇತರ ಸೌಲಭ್ಯಗಳನ್ನು ಸೂಕ್ತ ಪ್ರಾಧಿಕಾರವು ನಿಗದಿಪಡಿಸಿದಂತೆ ಮುಂದುವರಿಸಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT