ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ಚುನಾವಣೆ: ಟಿಎಂಸಿ ಜೊತೆ ಮೈತ್ರಿ ಇಲ್ಲ ಎಂದ ಆಮ್‌ ಆದ್ಮಿ ಪಕ್ಷ

Last Updated 12 ಡಿಸೆಂಬರ್ 2021, 12:31 IST
ಅಕ್ಷರ ಗಾತ್ರ

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿತೃಣಮೂಲ ಕಾಂಗ್ರೆಸ್‌ನೊಂದಿಗೆ (ಟಿಎಂಸಿ)ಮೈತ್ರಿ ಇಲ್ಲವೆಂದು ಆಮ್ ಆದ್ಮಿ ಪಕ್ಷ(ಎಎಪಿ) ಭಾನುವಾರ ತಿಳಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವಎಎಪಿಯ ಗೋವಾ ಘಟಕದ ಮುಖ್ಯಸ್ಥೆ ಅತಿಶಿ, ‘ಗೋವಾದಲ್ಲಿಪ್ರಾಮಾಣಿಕಹಾಗೂ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ರಚಿಸಲು ನಮ್ಮ ಪಕ್ಷನಿರ್ಧರಿಸಿದೆ. ಹಾಗಾಗಿ ಟಿಎಂಸಿಯೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದ್ದಾರೆ.

ಗೋವಾ ವಿಧಾನಸಭಾ ಚುನಾವಣೆಗೆ ಎಎಪಿಯು ಟಿಎಂಸಿಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವರದಿಪ್ರಕಟವಾಗಿತ್ತು. ಈವರದಿಯನ್ನು ಉಲ್ಲೇಖಿಸಿಪಶ್ಚಿಮ ಬಂಗಾಳ ಮೂಲದ ಲೇಖಕರೊಬ್ಬರುಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು ಈ ರೀತಿ ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT