ಮಂಗಳವಾರ, ಜುಲೈ 27, 2021
21 °C

ರಾಜ್ಯಗಳಿಗೆ ಲಸಿಕೆ ಪೂರೈಕೆ: ಯಾವುದೇ ಬಾಕಿ ಇಲ್ಲ ಎಂದ ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜ್ಯಗಳಿಗೆ ಪೂರೈಸಬೇಕಾಗಿದ್ದ ನಿಗದಿತ ಪ್ರಮಾಣದ ಕೋವಿಡ್–19 ನಿರೋಧಕ ಲಸಿಕೆಗಳನ್ನು ಜೂನ್ 21ರೊಳಗೆ ಸರಬರಾಜು ಮಾಡಲಾಗಿದ್ದು, ಯಾವುದೇ ಬಾಕಿ ಉಳಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ತಿಳಿಸಿದೆ.

18 ವರ್ಷದಿಂದ 44 ವರ್ಷದೊಳಗಿನ ವಯಸ್ಸಿನವರಿಗೆ ಉಚಿತ ಲಸಿಕೆಗಳನ್ನು ಹಾಕಲು ದೆಹಲಿಗೆ ಕೇಂದ್ರ ಸರ್ಕಾರವು ಲಸಿಕೆ ಸರಬರಾಜು ಮಾಡಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಆರೋಗ್ಯ ಸಚಿವಾಲಯವು ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಜೂನ್ 21ರೊಳಗೆ ಲಸಿಕಾ ತಯಾರಿಕಾ ಸಂಸ್ಥೆಗಳು ನೇರ ಖರೀದಿಯ ಮೂಲಕ ದೆಹಲಿಗೆ 5.6 ಲಕ್ಷ ಡೋಸ್‌ಗಳನ್ನು ಪೂರೈಸಿವೆ ಎಂದೂ ಸಚಿವಾಲಯವು ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರವು ಖರೀದಿಸಿರುವ ಲಸಿಕೆಗಳಲ್ಲಿ ಹೆಚ್ಚುವರಿಯಾಗಿ 8.8 ಲಕ್ಷದಷ್ಟು ಲಸಿಕೆಗಳನ್ನು ದೆಹಲಿಗೆ ಉಚಿತವಾಗಿ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ. ಜೂನ್ ಅಂತ್ಯದ ವೇಳೆಗೆ ಅಷ್ಟೂ ಪ್ರಮಾಣದ ಲಸಿಕೆಗಳು ಪೂರೈಕೆಯಾಗಲಿವೆ. ಜೂನ್ 22ರ ವೇಳೆಗೆ ದೆಹಲಿಯಲ್ಲಿ 9.9ಲಕ್ಷಕ್ಕೂಹೆಚ್ಚಿನ ಲಸಿಕೆಗಳು ಬಳಕೆಯಾಗದೇ ಉಳಿದಿವೆ ಎಂದೂ ಸಚಿವಾಲಯವು ವಿವರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು