ಮಂಗಳವಾರ, ಜನವರಿ 26, 2021
16 °C
ಸುಪ್ರೀಂ ಕೋರ್ಟ್‌

ತ್ರಿವಳಿ ತಲಾಖ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ನಿರ್ಬಂಧವಿಲ್ಲ: ಕೋರ್ಟ್

ಪಿಿಟಿಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಸ್ಲಿಂ ಮಹಿಳಾ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಅಡಿಯಲ್ಲಿ ಮಾಡಿದ ಅಪರಾಧಗಳಿಗೆ ನಿರೀಕ್ಷಣಾ ಜಾಮೀನು ನೀಡಲು ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಕಾಯ್ದೆ ಪ್ರಕಾರ ಮುಸ್ಲಿಂ ಮಹಿಳೆಯರಲ್ಲಿ ‘ತ್ರಿವಳಿ ತಲಾಖ್‌‘ ಮೂಲಕ ತ್ವರಿತಗತಿಯಲ್ಲಿ ವಿಚ್ಛೇದನ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಈ ಕಾಯ್ದೆಯಲ್ಲಿರುವ ನಿಬಂಧನೆಗಳ ಪ್ರಕಾರ, ಮುಸ್ಲಿಂ ಸಮುದಾಯದ ಪತಿ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿ ವಿಚ್ಛೇದನ ನೀಡಿದರೆ, ಆತನಿಗೆ ನೀಡುತ್ತಿರುವ ಜೈಲು ಶಿಕ್ಷೆಯನ್ನು ಮೂರು ವರ್ಷಗಳ ವರೆಗೆ ವಿಸ್ತರಿಸಬಹುದು ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಕಾಯ್ದೆಗೆ ಸಂಬಂಧಿತ ವಿಭಾಗಗಳನ್ನು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ (ಸಿಆರ್‌ಪಿಸಿ) ನಿಬಂಧನೆಯನ್ನು ಉಲ್ಲೇಖಿಸಿರುವ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಇದು ಬಂಧನಕ್ಕೊಳಗಾದ ವ್ಯಕ್ತಿಗೆ ಜಾಮೀನು ನೀಡುವ ನಿರ್ದೇಶನಗಳಿಗೆ ಸಂಬಂಧಿಸಿರುವುದಾಗಿದೆ ಎಂದು ಹೇಳಿದೆ.

ಈ ಮೇಲಿನ ಎಲ್ಲ ಕಾರಣಗಳಿಂದಾಗಿ 2019ರ ಕಾಯ್ದೆಯಡಿ ಅಪರಾಧವೆಸಗಿದ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಯಾವುದೇ ನಿರ್ಬಂಧಗಳಿಲ್ಲ. ಆದರೆ, ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡುವ ಮುನ್ನ, ದೂರದಾರ ಮಹಿಳೆಯ ಅಭಿಪ್ರಾಯವನ್ನು ಕೇಳಬೇಕಿದೆ‘ ಎಂದು ನ್ಯಾಯಮೂರ್ತಿ ಇಂದು ಮಹಲ್ಹೋತ್ರ ಮತ್ತು ಇಂದಿರಾ ಬ್ಯಾನರ್ಜಿಯವರನ್ನೊಳಗೊಂಡ ದ್ವಿಸದಸ್ಯ ಪೀಠ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು