ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮಾ ಮಸೀದಿಯಿಂದ ಪ್ರತಿಭಟನೆಗೆ ಕರೆ ಕೊಟ್ಟಿಲ್ಲ: ಶಾಹಿ ಇಮಾಮ್ ಸ್ಪಷ್ಟನೆ

ಅಕ್ಷರ ಗಾತ್ರ

ನವದೆಹಲಿ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ಜಾಮಾ ಮಸೀದಿ ಬಳಿ ನಡೆಯುತ್ತಿರುವ ಪ್ರತಿಭಟನೆಗೆ ಮಸೀದಿ ವತಿಯಿಂದ ಕರೆ ಕೊಟ್ಟಿಲ್ಲ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ತಿಳಿಸಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಪ್ರವಾದಿ ಮಹಮ್ಮದ್ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಶುಕ್ರವಾರ ನಮಾಜ್ ಬಳಿಕ ಮಸೀದಿ ಹೊರಗೆ ಸೇರಿದ್ದ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಸೀದಿಯ ಶಾಹಿ ಇಮಾಮ್, ‘ಅಲ್ಲಿ ಪ್ರತಿಭಟನೆ ಮಾಡುತ್ತಿರುವವರು ಯಾರೆಂದು ನಮಗೆ ತಿಳಿದಿಲ್ಲ. ಅವರು ಎಐಎಂಐಎಂ ಪಕ್ಷದವರು ಅಥವಾ ಓವೈಸಿ ಬೆಂಬಲಿಗರಿರಬಹುದು. ಅವರು ಪ್ರತಿಭಟನೆ ಮಾಡುವುದಿದ್ದರೆ ಮಾಡಲಿ. ಆದರೆ, ನಾವು ಅದನ್ನು ಬೆಂಬಲಿಸುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಶಾಹಿ ಇಮಾಮ್ ಹೇಳಿರುವುದಾಗಿ ಎಎನ್‌ಐ ಟ್ವೀಟಿಸಿದೆ.

ಈ ಮಧ್ಯೆ, ಪ್ರತಿಭಟನಾಕಾರರನ್ನು ಚದುರಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದ್ವೇಷ ಹರಡುವಿಕೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಡಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ವಿವಾದಿತ ಅರ್ಚಕ ಯತಿ ನರಸಿಂಗಾನಂದ್ ಸೇರಿ 31 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನೂಪುರ್ ಶರ್ಮಾ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಗಲ್ಫ್ ರಾಷ್ಟ್ರಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಭಾರತೀಯ ಉತ್ಪನ್ನಗಳಿಗೂ ನಿಷೇಧ ಹೇರಿ ಪ್ರತಿಭಟನೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT