ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಲ್ಯಾಂಬ್ಡಾ ಸೋಂಕು ಪ್ರಕರಣಗಳು ಕಂಡುಬಂದಿಲ್ಲ: ಕೇಂದ್ರ ಸರ್ಕಾರ

Last Updated 9 ಜುಲೈ 2021, 15:10 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಈವರೆಗೆ ಕೊರನಾ ವೈರಸ್‌ನ ಹೊಸ ರೂಪಾಂತರಿತ ತಳಿ ಸಾರ್ಸ್‌–ಕೋವಿಡ್‌–2 ಲ್ಯಾಂಬ್ಡಾ ಸೋಂಕು ಪ್ರಕರಣಗಳು ಕಂಡುಬಂದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

‘ಈಗಾಗಲೇ 25 ದೇಶಗಳಲ್ಲಿ ಲ್ಯಾಂಬ್ಡಾ ವೈರಸ್‌ ಕಾಣಿಸಿಕೊಂಡಿದೆ. ಪೆರುವಿನದಲ್ಲಿ ಶೇ 80ರಷ್ಟು ಮಂದಿ ಈ ಸೋಂಕಿಗೆ ತುತ್ತಾಗಿದ್ದಾರೆ’ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್‌ವಾಲ್‌ ಹೇಳಿದರು.

‘ದಕ್ಷಿಣ ಅಮೆರಿಕ, ಯುರೋಪ್‌, ಇಂಗ್ಲೆಂಡ್‌ನಲ್ಲಿಯೂ ಈ ವೈರಸ್‌ ಕಂಡುಬಂದಿದೆ. ಈ ಸಂಬಂಧ, ಭಾರತದ ಸಾರ್ಸ್‌ ಕೋವಿಡ್‌–2 ಜೆನೆಟಿಕ್ಸ್ ಕಾನ್ಸೊರ್ಟಿಯಮ್‌ (ಐಎನ್‌ಎಸ್‌ಎಸಿಒಜಿ) ಮೇಲ್ವಿಚಾರಣೆ ನಡೆಸುತ್ತಿದ್ದು, ಸಾರ್ವಜನಿಕರ ಮೇಲೆ ಈ ಸೋಂಕಿನಿಂದ ಉಂಟಾಗುವ ಪರಿಣಾಮಗಳ ಕುರಿತು ಸೂಕ್ಷ್ಮವಾಗಿ ಗಮನಹರಿಸುತ್ತಿದೆ. ಭಾರತದಲ್ಲಿ ಈವರೆಗೆ ಈ ತಳಿಯ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT