ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತಂಕ ಸೃಷ್ಟಿಸಿರುವ ಸಿ.1.2 ಕೋವಿಡ್ ರೂಪಾಂತರಿ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ

Last Updated 1 ಸೆಪ್ಟೆಂಬರ್ 2021, 13:58 IST
ಅಕ್ಷರ ಗಾತ್ರ

ನವದೆಹಲಿ: ದಕ್ಷಿಣ ಆಫ್ರಿಕಾ ಮತ್ತು ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಪತ್ತೆಯಾಗಿರುವ ಹೆಚ್ಚು ಸಾಂಕ್ರಾಮಿಕ ಎನ್ನಲಾದ ಸಿ.1.2 ಕೋವಿಡ್ ರೂಪಾಂತರಿ ವೈರಸ್ ಭಾರತದಲ್ಲಿ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಕೋವಿಡ್ -19ನ ಹೊಸ ರೂಪಾಂತರಿ ಸಿ.1.2 ಹೆಚ್ಚು ಹರಡಬಲ್ಲ ಮತ್ತು ಲಸಿಕೆಗಳು ಒದಗಿಸುವ ರಕ್ಷಣೆಯನ್ನು ತಪ್ಪಿಸುತ್ತದೆ ಎಂದು ಹೊಸ ಅಧ್ಯಯನವು ಬಹಿರಂಗಪಡಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಈ ತಳಿಯು ಅತ್ಯಂತ ಕಳವಳಕಾರಿಯಾಗಿದ್ದಾಗಿದೆ ಎಂದು ದಕ್ಷಿಣ ಆಫ್ರಿಕಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕಮ್ಯುನಿಕೇಬಲ್ ಡಿಸೀಸಸ್ (ಎನ್‌ಐಸಿಡಿ) ಮತ್ತು ಕ್ವಾಜುಲು-ನಟಾಲ್ ರಿಸರ್ಚ್ ಇನ್ನೋವೇಶನ್ ಅಂಡ್ ಸೀಕ್ವೆನ್ಸಿಂಗ್ ಪ್ಲಾಟ್‌ಫಾರ್ಮ್ (ಕೆಎಆರ್‌ಐಎಸ್‌ಪಿ)ನ ವಿಜ್ಞಾನಿಗಳು ಹೇಳಿದ್ದಾರೆ.

'ಭಾರತದಲ್ಲಿ ಇದುವರೆಗೆ ಸಿ .1.2 ಕೋವಿಡ್ ರೂಪಾಂತರ ಸೋಂಕಿತ ಪ್ರಕರಣ ಪತ್ತೆಯಾಗಿಲ್ಲ' ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ನಿಟ್ಟಿನಲ್ಲಿ, ಇನ್‌ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಮತ್ತು ಇಂಟಿಗ್ರೇಟಿವ್ ಬಯಾಲಜಿ ಸಂಸ್ಥೆ ಎಚ್ಚರವಹಿಸುತ್ತಿದೆ.

ಈ ಮಧ್ಯೆ, ಸಿ .1.2 ರೂಪಾಂತರದಲ್ಲಿ 100 ಸೀಕ್ವೆನ್ಸ್‌ಗಳಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಈ ಕೋವಿಡ್ ರೂಪಾಂತರವು ಚೀನಾ, ಕಾಂಗೋ , ಮಾರಿಷಸ್, ಯುಕೆ, ನ್ಯೂಜಿಲೆಂಡ್, ಪೋರ್ಚುಗಲ್ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕಂಡುಬಂದಿದೆ ಎಂದು ಅಧ್ಯಯನಕಾರರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT