ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣವ್‌ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ

Last Updated 25 ಆಗಸ್ಟ್ 2020, 11:17 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌‌ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆಕಂಡು ಬಂದಿಲ್ಲ. ಮಂಗಳವಾರವೂ ವೆಂಟಿಲೇಟರ್‌ ನೆರವಿನೊಂದಿಗೆ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಲ್ಲಿನ ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದುಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಇದೇ ಆಸ್ಪತ್ರೆಯಲ್ಲಿ ಅವರಿಗೆ ತುರ್ತುಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT