ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಮೇ ತಿಂಗಳಿಗೂ ಮುನ್ನ 10, 12ನೇ ತರಗತಿ ಪರೀಕ್ಷೆ ನಡೆಸಲಾಗದು

ಮಹಾರಾಷ್ಟ್ರ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್
Last Updated 6 ನವೆಂಬರ್ 2020, 10:45 IST
ಅಕ್ಷರ ಗಾತ್ರ

ಮುಂಬೈ: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣ 2021ರ ಮೇ ತಿಂಗಳಿಗೂ ಮುನ್ನ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದು ಎಂದು ಮಹಾರಾಷ್ಟ್ರ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತದ ಪರಿಸ್ಥಿತಿಯನ್ನು ಅವಲೋಕಿಸಿದರೆ, ಕೊರೊನಾ ವೈರಸ್ ದೀರ್ಘಕಾಲ ಇರುವಂತೆ ಕಾಣುತ್ತಿದೆ. ಹೀಗಾಗಿ ಪ್ರಸಕ್ತ ಅವಧಿಯ ಪಠ್ಯಗಳನ್ನು ಪೂರ್ಣಗೊಳಿಸುವ ಕುರಿತು ಹಾಗೂ ಪರೀಕ್ಷೆಗಳನ್ನು ಯಾವಾಗ ನಡೆಸಬಹುದು ಎಂಬುದರ ಕುರಿತು ಚರ್ಚಿಸಿದ್ದೇವೆ‘ ಎಂದರು.

‘ಈಗಿರುವ ಪಠ್ಯಗಳ ಪ್ರಮಾಣದಲ್ಲಿ ಎಷ್ಟನ್ನು ಕೈಬಿಡಬಹುದು ಎಂಬುದರ ಬಗ್ಗೆ ಚರ್ಚೆ ನಡೆಸುತ್ತೇನೆ. ಆಗ ಶಿಕ್ಷಕರು ಉಳಿದಿರುವ ಪಠ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಈಗಿರುವ ಪಠ್ಯಗಳಲ್ಲಿ ಶೇ 25ರಷ್ಟನ್ನಾದರೂ ಕಡಿತಗೊಳಿಸಬೇಕಾಗುತ್ತದೆ‘ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT