ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಲ್ಲ: ಸುಪ್ರೀಂ

Last Updated 17 ಫೆಬ್ರುವರಿ 2021, 7:06 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿಲ್ಲಎಂದುಕೋರ್ಟ್‌ ಸ್ಪಷ್ಟನೆ ನೀಡಿದೆ.

ನ್ಯಾಯಾಂಗದ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ರಾಜ್‌ದೀಪ್ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ ಎಂದು ಮಂಗಳವಾರ ಮಾಧ್ಯಮಗಳು ವರದಿ ಮಾಡಿದ್ದವು. ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆಯೂ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಮಾಹಿತಿಪ್ರಕಟವಾಗಿತ್ತು.

ಈ ಕುರಿತಂತೆ ಮಂಗಳವಾರ ತಡರಾತ್ರಿ ಸ್ಪಷ್ಟನೆ ನೀಡಿರುವ ಸುಪ್ರೀಂ ಕೋರ್ಟ್‌ ‘ರಾಜ್‌ದೀಪ್‌ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿರುವಂತೆಕೋರ್ಟ್‌ ವೆಬ್‌ಸೈಟ್‌ನಲ್ಲಿ‌ ತಪ್ಪಾಗಿ ತೋರಿಸಿದೆ. ಅವರ ವಿರುದ್ಧ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ದೂರು ದಾಖಲಿಸಿಲ್ಲ ಎಂದು ಸುಪ್ರೀಂ ಕೋರ್ಟ್’‌ ಹೇಳಿದೆ.

ಕೋರ್ಟ್‌ ವೆಬ್‌ಸೈಟ್‌ನಲ್ಲಿ ಆಗಿರುವ ಪ್ರಮಾದವನ್ನು ಸರಿಪಡಿಸಲು ಸೂಕ್ತಕ್ರಮಗಳನ್ನು ಕೈಗೊಳ್ಳುವುದಾಗಿ ಕೋರ್ಟಿನ ಉಪ ರಿಜಿಸ್ಟಾರ್‌ ರಾಕೇಶ್‌ ಶರ್ಮಾ ಹೇಳಿದ್ದಾರೆ.

ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್‌ ಭೂಷಣ್‌ ಅವರು ತಪ್ಪಿತಸ್ಥರು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜ್‌ದೀಪ್‌ ಸರ್‌ದೇಸಾಯಿ ಮಾಡಿದ ಟ್ವೀಟ್‌ಗಳು ಅವರಿಗೆ ಸಮಸ್ಯಾತ್ಮಕವಾಗಿ ಪರಿಣಮಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT