ಬುಧವಾರ, ನವೆಂಬರ್ 30, 2022
21 °C

ರಾಡಿಯಾ ಧ್ವನಿಮುದ್ರಿಕೆಯಲ್ಲಿ ಯಾವುದೇ ಅಪರಾಧ ಪತ್ತೆಯಾಗಿಲ್ಲ: ಸಿಬಿಐ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕಾರ್ಪೊರೇಟ್‌ ದಲ್ಲಾಳಿ ನೀರಾ ರಾಡಿಯಾ ಅವರು ಕೆಲ ರಾಜಕಾರಣಿಗಳು, ಉದ್ಯಮಿಗಳು, ಪತ್ರಕರ್ತರು ಹಾಗೂ ಇತರರೊಡನೆ ನಡೆಸಿರುವ ಸಂಭಾಷಣೆಗಳನ್ನೊಳಗೊಂಡ ಧ್ವನಿಮುದ್ರಿಕೆಯಲ್ಲಿ ಯಾವುದೇ ಬಗೆಯ ಅಪರಾಧ ಕಂಡುಬಂದಿಲ್ಲ’ ಎಂದು ಸಿಬಿಐ ಬುಧವಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌, ಹಿಮಾ ಕೊಹ್ಲಿ ಮತ್ತು ಪಿ.ಎಸ್‌.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತ ವಿಚಾರಣೆ ನಡೆಸಿತು.

‘ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಎಲ್ಲಾ ಧ್ವನಿಮುದ್ರಿಕೆಗಳನ್ನು ಸಿಬಿಐ ತನಿಖೆಗೊಳಪಡಿಸಿದೆ. ಈ ಕುರಿತ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಅದರಲ್ಲಿ 14 ಪ್ರಾಥಮಿಕ ವಿಚಾರಣೆಗಳನ್ನು ದಾಖಲಿಸಲಾಗಿದೆ’ ಎಂದು ಸಿಬಿಐ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯ ಭಾಟಿ ಅವರು ನ್ಯಾಯಪೀಠಕ್ಕೆ ತಿಳಿಸಿದರು.

ಈ ಕುರಿತು ವಾಸ್ತವ ಸ್ಥಿತಿ ಒಳಗೊಂಡ ಪರಿಷ್ಕೃತ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿದ ನ್ಯಾಯಪೀಠವು ವಿಚಾರಣೆಯನ್ನು ಅಕ್ಟೋಬರ್‌ 12ಕ್ಕೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು