ಶುಕ್ರವಾರ, ಅಕ್ಟೋಬರ್ 30, 2020
23 °C

ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸುವ ಚಿಂತನೆ ಇಲ್ಲ -ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್–ಪ್ರಾತಿನಿಧಿಕ ಚಿತ್ರ

ನವದೆಹಲಿ: ಪ್ಲಾಸ್ಮಾ ಚಿಕಿತ್ಸೆಯನ್ನು ಕೋವಿಡ್-19ಗೆ ಮುಖ್ಯ ಚಿಕಿತ್ಸೆಯಾಗಿ ಆರೋಗ್ಯ ಸಚಿವಾಲಯ ಶಿಫಾರಸು ಮಾಡಿಲ್ಲ. ಹಾಗೂ ಪ್ಲಾಸ್ಮಾ ಬ್ಯಾಂಕ್‌ಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ರಾಜ್ಯಸಭೆಯಲ್ಲಿ ತಿಳಿಸಿತು.

ಈ ಕುರಿತು ಲಿಖಿತ ಉತ್ತರ ನೀಡಿರುವ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರು, ಕೋವಿಡ್‌ಗೆ ಚಿಕಿತ್ಸೆ ನೀಡಲು ರಾಜ್ಯಗಳು ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲು ಮುಂದಾಗಿವೆ. ಆದರೆ, ಕೇಂದ್ರೀಕೃತ ದಾಖಲೆ ವ್ಯವಸ್ಥೆ ಇಲ್ಲ ಎಂದು ತಿಳಿಸಿದರು.

ಕೋವಿಡ್ ಅನ್ನು ಪರಿಣಾಮಕಾರಿಯಾಗಿ ಎದುರಿಸಲು ದೇಶವ್ಯಾಪಿ ಹೆಚ್ಚಿನ ಪ್ಲಾಸ್ಮಾ ಬ್ಯಾಂಕ್‌ಗಳನ್ನು ಸ್ಥಾಪಿಸುವ ಚಿಂತನೆ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು