ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಜಾರಿ ಮಾಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ: ಕೇಂದ್ರ

Last Updated 30 ನವೆಂಬರ್ 2021, 11:29 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ತಿಳಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆಯು 2020ರ ಜನವರಿ 10ರಿಂದ ಜಾರಿಗೆ ಬಂದಿದೆ. ಸಿಎಎ ವ್ಯಾಪ್ತಿಗೆ ಒಳಪಡುವ ಜನರು ನಿಯಮಗಳು ರೂಪಿಸಿದ ಬಳಿಕ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಅವರು ಲಿಖಿತ ಉತ್ತರ ನೀಡಿದ್ದಾರೆ.

‘ರಾಷ್ಟ್ರಮಟ್ಟದಲ್ಲಿ ಎನ್‌ಆರ್‌ಸಿ ತಯಾರಿಯ ಕುರಿತು ಕೇಂದ್ರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ ಅಸ್ಸಾಂಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಎನ್‌ಆರ್‌ಸಿಯಲ್ಲಿನ ಸೇರ್ಪಡೆಗಳ ಪೂರಕ ಪಟ್ಟಿಯನ್ನು ಹಾಗೂ ಎನ್‌ಆರ್‌ಸಿಯಿಂದ ಹೊರಗುಳಿಯುವ ಕುಟುಂಬಗಳ ಆನ್‌ಲೈನ್‌ ಪಟ್ಟಿಯನ್ನು 2019ರ ಆಗಸ್ಟ್‌ 31ರಂದು ಪ್ರಕಟಿಸಲಾಗಿದೆ’ ಎಂದು ರಾಯ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT