ಶನಿವಾರ, ಜೂನ್ 12, 2021
28 °C

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ: ಇನ್ನೂ ನಿರ್ಧಾರ ಇಲ್ಲ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಪಿಡುಗಿನ ಹಿನ್ನೆಲೆಯಲ್ಲಿ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನೂ ರದ್ದುಪಡಿಸಬೇಕು ಎಂದು ಕೆಲವು ಪೋಷಕರು ಒತ್ತಾಯಿಸತೊಡಗಿದ್ದು, ಪರೀಕ್ಷೆ ರದ್ದುಪಡಿಸುವ ನಿಟ್ಟಿನಲ್ಲಿ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

‘ಪರೀಕ್ಷೆ ರದ್ದುಪಡಿಸುವಂತಹ ನಿರ್ಧಾರಕ್ಕೆ ಬರಲಾಗಿಲ್ಲ. ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬಾರದು’ ಎಂದು ಸಿಬಿಎಸ್‌ಇಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಇಲ್ಲಿ ತಿಳಿಸಿದರು.

ಕೋವಿಡ್ ಪಿಡುಗು ವ್ಯಾಪಿಸಿದ ಕಾರಣ ಏಪ್ರಿಲ್‌ 14ರಂದು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿತ್ತು ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ‘ಜೂನ್‌ 1ರ ಬಳಿಕ ಪರಿಸ್ಥಿತಿಗಳ ಅವಲೋಕನ ನಡೆಸಲಾಗುವುದು. ಪರೀಕ್ಷೆ ನಡೆಯುವುದಕ್ಕೆ 15 ದಿನ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು’ ಎಂದು ಆ ದಿನ ತಿಳಿಸಲಾಗಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು