ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಕಳವು: ತಡವಾಗಿ ಮಾಹಿತಿ ಸಲ್ಲಿಸಿದರೆಂದು ಪರಿಹಾರ ನಿರಾಕರಿಸಬಾರದು – ಸುಪ್ರೀಂ

Last Updated 11 ಫೆಬ್ರುವರಿ 2022, 15:22 IST
ಅಕ್ಷರ ಗಾತ್ರ

ನವದೆಹಲಿ: ವಾಹನ ಕಳವಾದ ಬಗ್ಗೆ ತಡವಾಗಿ ಮಾಹಿತಿ ನೀಡಲಾಗಿದೆ ಎಂಬ ಕಾರಣ ಹೇಳಿ ವಿಮಾ ಕಂಪನಿಗಳು ಕ್ಲೇಮು ನಿರಾಕರಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಬೇಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ಈ ಸಂಬಂಧ ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು (ಎನ್‌ಸಿಡಿಆರ್‌ಸಿ) ನೀಡಿದ್ದ ಆದೇಶವನ್ನು ವಜಾಗೊಳಿಸಿತು.ಓರಿಯಂಟಲ್ ಇನ್ಸುರೆನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಎನ್‌ಸಿಡಿಆರ್‌ಸಿ ನೀಡಿರುವ ಆದೇಶ ದೋಷದಿಂದ ಕೂಡಿದೆ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ವಾಹನ (ಟಾಟಾ ಐವಾ ಟ್ರಕ್) ಕಳುವಾದ ಹಿನ್ನೆಲೆಯಲ್ಲಿ ಜೈನಾ ಕನ್ಸ್‌ಟ್ರಕ್ಷನ್ ಕಂಪನಿ ಲಿಮಿಟೆಡ್ ಪರಿಹಾರ ಕೋರಿ ಅರ್ಜಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT