ಗುರುವಾರ , ಜನವರಿ 21, 2021
26 °C

ಬಜರಂಗದಳದ ಮೇಲಿನ ನಿಷೇಧ ಅನಿವಾರ್ಯವಲ್ಲ: ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲವೆಂದು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ ಅಜಿತ್‌ ಮೋಹನ್‌ ತಿಳಿಸಿದ್ದಾರೆ. ಈ ವಿಚಾರವಾಗಿ ಸಂಸದೀಯ ಸಮಿತಿಗೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ಜೂನ್‌ ತಿಂಗಳಲ್ಲಿ ದೆಹಲಿಯ ಚರ್ಚ್‌ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊ ಅನ್ನು ಬಜರಂಗದಳವು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದುಬಂದಿದ್ದರೂ, ಬಜರಂಗದಳವನ್ನು ನಿಷೇಧಿಸಲು ಫೇಸ್‌ಬುಕ್‌ ಹಿಂದೇಟು ಹಾಕಿತ್ತು.

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿತ್ತು.

'ನಾಗರಿಕರ ದತ್ತಾಂಶ ಸುರಕ್ಷತೆ' ಬಗೆಗಿನ ವಿಚಾರಣೆಗೆ ಹಾಜರಾಗುವಂತೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯು ಅಜಿತ್‌ ಮೋಹನ್‌ ಅವರಿಗೆ ಸೂಚಿಸಿತ್ತು.

ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಬಜರಂಗದಳದ ವಿಚಾರವಾಗಿ ಫೇಸ್‌ಬುಕ್‌ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಪ್ರಶ್ನೆ ಮಾಡಿದೆ.

ಬಜರಂಗದಳದ ಪೋಸ್ಟ್‌ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು  ನಿಷೇಧಿಸಿಸುವ ಅನಿವಾರ್ಯತೆ ಫೇಸ್‌ಬುಕ್‌ ಇಂಡಿಯಾ ಕಂಪನಿಗೆ ಇರಲಿಲ್ಲವೆಂದು ಅಜಿತ್‌ ಮೋಹನ್‌ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು