ಬುಧವಾರ, ಮೇ 18, 2022
23 °C

ಗಣರಾಜ್ಯೋತ್ಸವಕ್ಕೆ ಈ ಬಾರಿಯೂ ಹೊರ ದೇಶದ ಅತಿಥಿ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೊರ ದೇಶದ ಗಣ್ಯರು ಈ ವರ್ಷವೂ ಪಾಲ್ಗೊಳ್ಳುವುದಿಲ್ಲ ಎಂದು ಮೂಲಗಳು ಬುಧವಾರ ಹೇಳಿವೆ. 

ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಸತತ ಎರಡನೇ ವರ್ಷವೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹೊರ ದೇಶದ ಅತಿಥಿ ಭಾಗವಹಿಸುತ್ತಿಲ್ಲ.

ಆದರೆ, ಜನವರಿ 27 ರಂದು  ಭಾರತ–ಮಧ್ಯ ಏಷ್ಯಾದ ಮೊದಲ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್‌ ಮಾದರಿಯಲ್ಲಿ ನಡೆಸಿಕೊಡಲಿದ್ದಾರೆ.

ಶೃಂಗಸಭೆಯಲ್ಲಿ ಕಜಕಿಸ್ತಾನ, ಕಿರ್ಗಿಸ್‌ ಗಣರಾಜ್ಯ, ತಜಕಿಸ್ತಾನ, ತುರ್ಕಮೇನಿಸ್ತಾನ ಮತ್ತು ಉಜ್ಬೇಕಿಸ್ತಾನ ದೇಶಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು