ಬುಧವಾರ, ಸೆಪ್ಟೆಂಬರ್ 30, 2020
22 °C

ಚೀನಾ–ಭಾರತ ಗಡಿಯಲ್ಲಿ ನುಸುಳುವಿಕೆ ಪ್ರಕರಣಗಳಿಲ್ಲ: ಕೇಂದ್ರ ಗೃಹ ಸಚಿವಾಲಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ ಆರು ತಿಂಗಳಲ್ಲಿ ‌ಚೀನಾ–ಭಾರತ ಗಡಿಯ ಮೂಲಕ ಯಾವುದೇ ನುಸುಳಿಕೆ ಪ್ರಕರಣಗಳು ನಡೆದಿಲ್ಲ ಎಂದು ಸರ್ಕಾರ ಬುಧವಾರ  ರಾಜ್ಯಸಭೆಗೆ ತಿಳಿಸಿದೆ.

ಇದೇ ವೇಳೆ, ಭಾರತ ಮತ್ತು ಪಾಕಿಸ್ತಾನದ ಭಾಗದಲ್ಲಿ 47 ಬಾರಿ ಒಳಸುಳುವಿಕೆಯ ಪ್ರಯತ್ನಗಳು ನಡೆದಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಲಿಖಿತ ಹೇಳಿಕೆಯಲ್ಲಿ ತಿಳಿಸಿದೆ. ಪಾಕಿಸ್ತಾನಿ ಉಗ್ರರು ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದೊಳಗೆ 594 ಬಾರಿ ನುಸುಳಲು ಪ್ರಯತ್ನಿಸಿರುವುದು ವರದಿಯಾಗಿದೆ. ಇದರಲ್ಲಿ 312 ಬಾರಿ ಯಶಸ್ವಿಯಾಗಿದ್ದಾರೆ ಎಂದೂ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮೂರು ತಿಂಗಳಲ್ಲಿ ಭದ್ರತಾ ಪಡೆಯವರು 562 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ ಅವಧಿಯಲ್ಲಿ 46 ಉಗ್ರರನ್ನು ಬಂಧಿಸಿದ್ದಾರೆ ಎಂದು ಮತ್ತೊಬ್ಬ ಗೃಹ ಖಾತೆಯ ರಾಜ್ಯ ಸಚಿವ ಜಿ. ಕೃಷ್ಣಾರೆಡ್ಡಿ ರಾಜ್ಯಸಭೆಗೆ ತಿಳಿಸಿದ್ದಾರೆ.

2018ರಿಂದ ಸೆಪ್ಟೆಂಬರ್ 8, 2020ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 76 ಸೇನಾ ಯೋಧರು ಹತ್ಯೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು