ಸೋಮವಾರ, ಏಪ್ರಿಲ್ 19, 2021
32 °C

ಈ ವರ್ಷ ಉಗ್ರರ ಒಳನುಸುಳುವಿಕೆ ನಡೆದಿಲ್ಲ: ದಿಲ್‌ಭಾಗ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮ ಮತ್ತು ಕಾಶ್ಮೀರ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಈ ವರ್ಷ ಉಗ್ರರ ಒಳನುಸುಳುವಿಕೆ ನಡೆದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಮಹಾ ನಿರ್ದೇಶಕ ದಿಲ್‌ಭಾಗ್‌ ಸಿಂಗ್‌ ಶನಿವಾರ ಹೇಳಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನದ ಅಧಿಕಾರಿಗಳ ನಡುವೆ ಈಚೆಗೆ ನಡೆದ ಶಾಂತಿ ಒಪ್ಪಂದದ ಬಳಿಕ ಕದನವಿರಾಮ ಉಲ್ಲಂಘನೆಯ ಪ್ರಕರಣಗಳೂ ವರದಿಯಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.

‘ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಮಾದಕವಸ್ತುಗಳ ಸಾಗಣೆ ಹೆಚ್ಚಿದೆ. ಕಳೆದ ವರ್ಷ ಭಾರಿ ಪ್ರಮಾಣದಲ್ಲಿ ಹೆರಾಯಿನ್‌ ವಶಪಡಿಸಿಕೊಳ್ಳಲಾಗಿತ್ತು. ಇದರ ವಿರುದ್ಧ ಕಾರ್ಯಾಚರಣೆಗಾಗಿ ಮಾದಕ ವಸ್ತು ನಿಗ್ರಹ ಕಾರ್ಯಪಡೆಯನ್ನು (ಎಎನ್‌ಟಿಎಫ್‌) ರಚಿಸಲಾಗಿದ್ದು, ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದಿದ್ದಾರೆ.

‘ಮಾದಕ ವಸ್ತುಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಕಳೆದ ವರ್ಷ ಉಗ್ರರು ಡ್ರೋನ್‌ಗಳನ್ನು ಬಳಸಿದ್ದರು. ಈ ರೀತಿ ಸಾಗಣೆ ನಡೆಸಿದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ಹೇಳಿದ್ದಾರೆ.

ಭಯೋತ್ಪಾದಕ  ಸಂಘಟನೆಗಳಿಗೆ ಸೇರಿದ್ದ ಹಲವು ಯುವಕರನ್ನು ಕಳೆದ ವರ್ಷ ಮರಳಿ ಕರೆತರಲಾಗಿತ್ತು. ಮತ್ತು 12 ಮಂದಿ ಶರಣಾಗತರಾಗಿದ್ದರು ಎಂದೂ ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು