ಮಂಗಳವಾರ, ಡಿಸೆಂಬರ್ 1, 2020
18 °C

ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವದ ಬಿಕ್ಕಟ್ಟಿಲ್ಲ: ಸಲ್ಮಾನ್ ಖುರ್ಷಿದ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವದ ಬಿಕ್ಕಟ್ಟಿಲ್ಲ, ಎಲ್ಲರೂ ಸೋನಿಯಾ ಮತ್ತು ರಾಹುಲ್ ಗಾಂಧಿಯವರನ್ನು ಬೆಂಬಲಿಸುತ್ತಿದ್ದಾರೆ‘ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರಲ್ಲಿ ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಸಲ್ಮಾನ್ ಖುರ್ಷಿದ್‌, ‘ಪಕ್ಷಕ್ಕೆ ಸಂಬಂಧಿಸಿದ ಯಾವುದೇ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಪಕ್ಷದೊಳಗೆ ಸಾಕಷ್ಟು ಅವಕಾಶಗಳಿವೆ. ಪಕ್ಷದ ಹೊರಗೆ ಅಭಿಪ್ರಾಯ ವ್ಯಕ್ತಪಡಿಸುವುದು ನೋವುಂಟು ಮಾಡುತ್ತದೆ’ ಎಂದಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವ ಕುರಿತು ಹಿರಿಯ ನಾಯಕರಾದ ಕಪಿಲ್ ಸಿಬಲ್‌ ಮತ್ತಿತರರು ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ನಂತರ ಸಲ್ಮಾನ್ ಖುರ್ಷಿದ್ ಈ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು