ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವುದೇ ವರ್ಗಕ್ಕೆ ಮೀಸಲಾತಿ ನೀಡುವಂತೆ ಕೋರ್ಟ್‌ ಆದೇಶ ನೀಡುವಂತಿಲ್ಲ: ‘ಸುಪ್ರೀಂ’

Last Updated 26 ಜನವರಿ 2022, 13:45 IST
ಅಕ್ಷರ ಗಾತ್ರ

ನವದೆಹಲಿ: ‘ಯಾವುದೇ ವರ್ಗದ ಜನರಿಗೆ ಮೀಸಲಾತಿ ನೀಡುವಂತೆ ನ್ಯಾಯಾಲಯವೊಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತಿಲ್ಲ’ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

ಪಂಜಾಬ್‌ ರಾಜ್ಯದ ಸರ್ಕಾರಿ ವೈದ್ಯ ಮತ್ತು ದಂತ ವೈದ್ಯ ಕಾಲೇಜುಗಳಲ್ಲಿ ಕ್ರೀಡಾ ಕೋಟಾದಡಿ ಶೇ 3ರಷ್ಟು ಮೀಸಲಾತಿ ನೀಡುವಂತೆ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ 2019ರ ಆಗಸ್ಟ್‌ನಲ್ಲಿ ನೀಡಿದ್ದ ಆದೇಶವನ್ನು ನ್ಯಾಯಪೀಠ ರದ್ದುಗೊಳಿಸಿತು.

‘ಯಾವುದೇ ವರ್ಗಕ್ಕೆ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಕ್ಕೆ ಇದೆ. ಈ ವಿಷಯವಾಗಿ ಕೋರ್ಟ್‌ ಆದೇಶ ನೀಡುವಂತಿಲ್ಲ. ಅಲ್ಲದೇ, ಮೀಸಲಾತಿಯನ್ನು ನೀಡಲೇಬೇಕು ಎಂದು ನ್ಯಾಯಾಲಯಗಳು ನಿರ್ದೇಶನ ನೀಡಬಾರದು’ ಎಂದು ನ್ಯಾಯಪೀಠ ಹೇಳಿದೆ.

‘ಇಂಥ ಆದೇಶ ನೀಡುವ ಮೂಲಕ ಹೈಕೋರ್ಟ್‌ ದೊಡ್ಡ ಪ್ರಮಾದ ಎಸಗಿದೆ ಹಾಗೂ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT