ಕೋಲ್ಕತ್ತ: ‘ಯಸ್ ಚಂಡಮಾರುತದಿಂದ ಅಪಾರ ಪ್ರಮಾಣದ ಹಾನಿಯುಂಟಾಗಿದ್ದು, ಕೇಂದ್ರ ಸರ್ಕಾರ ಯಾವುದೇ ಆರ್ಥಿಕ ನೆರವು ನೀಡಿಲ್ಲ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಯಸ್ ಚಂಡಮಾರುತವು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ, ಗುಜರಾತ್ಗೆ ಬಂದಪ್ಪಳಿಸಿತ್ತು. ಇದರಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಹಾನಿಗೆ ಒಳಗಾಗಿದ್ದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಗೆ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಈ ಬೆಳವಣಿಗೆಯ ಕೆಲವೇ ಗಂಟೆಗಳಲ್ಲಿ ರಾಜ್ಯದ ಮುಖ್ಯಕಾರ್ಯದರ್ಶಿ ಆಲಾಪನ್ ಬಂದ್ಯೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರವು ಕೇಂದ್ರ ಸೇವೆಗೆ ಕರೆಸಿಕೊಂಡು ಆದೇಶ ಹೊರಡಿಸಿತ್ತು. ಆದರೆ, ಕೇಂದ್ರ ಸರ್ಕಾರದ ಈ ಆದೇಶವನ್ನು ಪಶ್ಚಿಮ ಬಂಗಾಳ ಸರ್ಕಾರವು ತಿರಸ್ಕರಿಸಿತ್ತು.

ಇದರ ಬೆನ್ನಲ್ಲೇ ಆಲಾಪನ್ ಬಂದ್ಯೋಪಾಧ್ಯಾಯ ಅವರಿಗೆ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಕೇಂದ್ರ ಗೃಹ ಸಚಿವಾಲಯ ನೋಟಿಸ್ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.