ಭಾನುವಾರ, ಏಪ್ರಿಲ್ 11, 2021
32 °C

ಅರುಣಾಚಲ ಪ್ರದೇಶ: ನಾಲ್ಕು ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಟಾನಗರ‌: ಅರುಣಾಚಲ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಒಂದೇ ಒಂದು ಹೊಸ ಕೋವಿಡ್‌ 19 ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಕೇವಲ ಮೂರು ಸಕ್ರಿಯ ಪ್ರಕರಣಗಳಿದ್ದು, 16,780 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,839 ಆಗಿದೆ ಎಂದು ರಾಜ್ಯ ಸರ್ವೈಲೆನ್ಸ್ ಅಧಿಕಾರಿ ಡಾ. ಲೊಬ್ಸಾಂಗ್ ಜಂಪಾ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಇದುವರೆಗೆ 56 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.  ಇದುವರೆಗೆ 4,08,728 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಜಂಪಾ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು