ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ: ಭೂಪೇಶ್ ಬಘೇಲ್

Last Updated 5 ಡಿಸೆಂಬರ್ 2021, 13:49 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿಯನ್ನು ಎದುರಿಸಲು ಪ್ರಮುಖ ಆಧಾರ ಸ್ಥಂಭವಾಗಿರುವ ಕಾಂಗ್ರೆಸ್‌ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ ಎಂದು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

'ಯುಪಿಎ ಮೈತ್ರಿಕೂಟ ಇಲ್ಲ’ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಘೇಲ್‌ ಅವರು, ಆಡಳಿತಾರೂಢ ಪಕ್ಷದ ವಿರುದ್ಧ ಹೋರಾಡುವಲ್ಲಿ ಟಿಎಂಸಿಯನ್ನು ಪ್ರಮುಖ ವಿರೋಧ ಪಕ್ಷವಾಗಿಸಲು ಬಯಸುತ್ತೀರಾ? ಅಥವಾ ಇತರ ವಿರೋಧ ಪಕ್ಷಗಳನ್ನೂ ಜೊತೆಗೆ ಸೇರಿಸಿಕೊಳ್ಳುತ್ತೀರಾ? ಎಂಬುದನ್ನು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧಪಕ್ಷದ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಮೈತ್ರಿಕೂಟ ತಿರ್ಮಾನಿಸಲಿದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT