ರೈಲ್ವೆಯಲ್ಲಿ ಸುರಕ್ಷತೆಗೆ ಆದ್ಯತೆ; ಒಂದೇ ಒಂದು ಸಾವಿಲ್ಲ: ಪಿಯೂಷ್ ಗೋಯಲ್

ನವದೆಹಲಿ: ಸುಮಾರು 22 ತಿಂಗಳಲ್ಲಿ ರೈಲ್ವೆ ಅಪಘಾತದಿಂದ ಒಂದೇ ಒಂದು ಸಾವು ಸಂಭವಿಸಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದರು.
‘ಆರು ವರ್ಷಗಳಿಂದ ನಾವು ಸುರಕ್ಷತೆಗೆ ಹೆಚ್ಚು ಗಮನ ಕೇಂದ್ರೀಕರಿಸಿದ್ದೇವೆ. 2019ರಲ್ಲಿ ಸಂಭವಿಸಿದ ರೈಲ್ವೆ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದನ್ನು ಹೊರತುಪಡಿಸಿ, ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ’ ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.
‘ಸದ್ಯ ಶೇ 70ರಷ್ಟು ಪ್ರಯಾಣಿಕ ರೈಲುಗಳು ಕಾರ್ಯಾಚರಿಸುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ರೈಲ್ವೆ ಸುರಕ್ಷತಾ ಕೆಲಸಗಳಿಗೆ ಹೆಚ್ಚಿನ ಅನುದಾನವನ್ನೂ ವಿನಿಯೋಗಿಸುತ್ತಿದೆ. ಪುನರ್‌ರಚಿತ ರೈಲ್ವೆ ಮಂಡಳಿಯಲ್ಲಿ ಮೊದಲ ಬಾರಿಗೆ ಸುರಕ್ಷತೆಗಾಗಿ ಮಹಾನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಅವರು ಸುರಕ್ಷತೆಗಾಗಿಯೇ ಸಂಪೂರ್ಣ ಗಮನ ಕೇಂದ್ರೀಕರಿಸಿರುತ್ತಾರೆ’ ಎಂದು ಸಚಿವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.