ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಖಾಸಗಿಕರಣ ಇಲ್ಲ: ಅಶ್ವಿನಿ ವೈಷ್ಣವ್

Last Updated 9 ಏಪ್ರಿಲ್ 2022, 16:16 IST
ಅಕ್ಷರ ಗಾತ್ರ

ಚೆನ್ನೈ: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದುಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಪುನರುಚ್ಚರಿಸಿದರು.

ದೆಹಲಿಯ ಪೆರಂಬುರ್‌ನಲ್ಲಿ ನಡೆದ ಭಾರತೀಯ ರೈಲ್ವೆ ಮಝ್ದೂರ್‌ ಸಂಘದ (ಬಿಆರ್‌ಎಂಎಸ್‌) 20ನೇ ಅಖಿಲ ಭಾರತ ಸಮ್ಮೇಳನವನ್ನು ವರ್ಚುಅಲ್‌ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.

ಸುರಕ್ಷತೆ ಹಾಗೂ ಸೌಕರ್ಯಗಳ ಕುರಿತು ಪ್ರಯಾಣಿಕರು ಹೊಂದಿರುವ ಆಶೋತ್ತರಗಳನ್ನು ಪೂರೈಸುವ ನಿಟ್ಟಿನಲ್ಲಿ ರೈಲ್ವೆ ವಲಯವು ಇತ್ತೀಚಿನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಅವರು ಒತ್ತಿ ಹೇಳಿದರು.

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗಳಿಗೆ ಇಂಟಿಗ್ರಲ್‌ ಕೋಚ್‌ ಫ್ಯಾಕ್ಟರಿ (ಐಸಿಎಫ್‌) ಸಹಕಾರ ನೀಡುತ್ತಿರುವ ಮಾದರಿಯಲ್ಲಿಯೇ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಬೇಕು ಮತ್ತು ಈ ವಲಯವನ್ನು ಮುಂದಕ್ಕೆ ಕೊಂಡೊಯ್ಯಬೇಕು ಎಂದು ಅವರು ಹೇಳಿದರು.

‘ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಆದರೆ ವಿರೋಧ ಪಕ್ಷಗಳು ಆಗಿದ್ದಾಗ್ಗೆ ರೈಲ್ವೆ ಖಾಸಗೀಕರಣದ ಕುರಿತು ಆರೋಪ ಮಾಡುತ್ತಿವೆ’ ಎಂದರು.

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳನ್ನು ಕೇಂದ್ರ ಸರ್ಕಾರದ ಉತ್ಪಾದಕ ಭಾರತ (ಮೇಕ್‌ ಇನ್‌ ಇಂಡಿಯ) ಉಪಕ್ರಮದ ಅಡಿ ಪೆರಂಬುರ್‌ನ ಐಸಿಎಫ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT