ಗುರುವಾರ , ಜುಲೈ 7, 2022
23 °C

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಯೋಜನೆಯಿಲ್ಲ: ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ಯಾವುದೇ ಪ್ರಸ್ತಾವ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರಾವ್‌ ಸಾಹೇಬ್‌ ಪಾಟೀಲ್‌ ದಾನ್ವೆ  ಬುಧವಾರ ಹೇಳಿದರು. 

ಪ್ರಶ್ನೋತ್ತರ ಅವಧಿಯಲ್ಲಿ ಲೋಕಸಭೆಗೆ ಮಾಹಿತಿ ನೀಡಿದ ಅವರು, ಕೊಂಕಣ ರೈಲ್ವೆಯು ಒಂದು ನಿಗಮವಾಗಿದ್ದು ಕೇಂದ್ರ ಸರ್ಕಾರ ಇದಕ್ಕೆ ಸಹಾಯ ಮಾಡುತ್ತಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜೊತೆ ಸೇರಿಸುವ ಯಾವುದೇ ಪ್ರಸ್ತಾವನೆ ಇಲ್ಲ’ ಎಂದು ಹೇಳಿದರು.

ಕೊಂಕಣ ರೈಲ್ವೆಯು ಮಂಗಳೂರಿನಿಂದ ಮುಂಬೈಗೆ ಸಂಪರ್ಕ ಕಲ್ಪಿಸುತ್ತದೆ. 741 ಕಿ.ಮೀ.ಉದ್ದದ ರೈಲು ಮಾರ್ಗವು ಪಶ್ಚಿಮ ಕರಾವಳಿಯಲ್ಲಿ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕವನ್ನು ಹಾದು ಹೋಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು