ಶನಿವಾರ, ಮೇ 15, 2021
25 °C

ವಲಸೆ ಕಾರ್ಮಿಕರಿಗಾಗಿ 'ಶ್ರಮಿಕ' ರೈಲು ಓಡಿಸುವ ಯೋಜನೆ ಇಲ್ಲ: ರೈಲ್ವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕರೆದೊಯ್ಯಲು ಅನುಕೂಲವಾಗುವಂತೆ ಶ್ರಮಿಕ ವಿಶೇಷ ರೈಲುಗಳನ್ನು ಓಡಿಸುವ ಯೋಜನೆ ಇಲ್ಲ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಈಗಾಗಲೇ ಸಾಕಷ್ಟು ಸಂಖ್ಯೆಯ ವಿಶೇಷ ರೈಲುಗಳು ಚಲಿಸುತ್ತಿವೆ. ಅಗತ್ಯ ಬಿದ್ದರೆ ಹೆಚ್ಚಿನ ರೈಲುಗಳನ್ನು ಓಡಿಸಲು ರೈಲ್ವೆ ಸಿದ್ಧವಾಗಿದೆ. ಆದರೆ ಶ್ರಮಿಕ ವಿಶೇಷ ರೈಲುಗಳನ್ನು ಓಡಿಸುವ ಅಗತ್ಯವಿಲ್ಲ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಯಾಣಿಕರನ್ನು ಅವರ ಊರುಗಳಿಗೆ ಕರೆದೊಯ್ಯಲು ಈಗ ಚಲಿಸುತ್ತಿರುವ ರೈಲುಗಳು ಸಾಕು. ಕಡಿಮೆ ಸಮಯದಲ್ಲಿ ಹೆಚ್ಚಿನ ರೈಲುಗಳನ್ನು ಓಡಿಸಲು ರೈಲ್ವೆ ಸಜ್ಜಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ರೈಲ್ವೆಯು ಪ್ರಸ್ತುತ ದಿನಕ್ಕೆ ಸರಾಸರಿ 1,402 ವಿಶೇಷ ರೈಲು ಸೇವೆಗಳನ್ನು ನೀಡುತ್ತಿದೆ. ಒಟ್ಟು 5,381 ಉಪನಗರ ರೈಲುಗಳು ಮತ್ತು 830 ಪ್ಯಾಸೆಂಜರ್ ರೈಲುಗಳು ಸಹ ಕಾರ್ಯನಿರ್ವಹಿಸುತ್ತಿವೆ.

ಶ್ರಮಿಕ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ತಪ್ಪು ಮಾಹಿತಿಗಳು ಬಿತ್ತರವಾಗಿವೆ. ಅಂತಹ ಯಾವುದೇ ಶ್ರಮಿಕ ವಿಶೇಷ ರೈಲುಗಳನ್ನು ಓಡಿಸುವ ಯೋಜನೆ ಇಲ್ಲ. ಈ ಕುರಿತ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ರೈಲ್ವೆ ಟ್ವೀಟ್‌ ಮಾಡಿದೆ.

ಕಳೆದ ವರ್ಷ ಲಾಕ್‌ಡೌನ್ ಸಮಯದಲ್ಲಿ ಸುಮಾರು 63 ಲಕ್ಷ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕಳುಹಿಸಲು ಭಾರತೀಯ ರೈಲ್ವೆ ಒಟ್ಟು 4,615 ಶ್ರಮಿಕ ವಿಶೇಷ ರೈಲುಗಳನ್ನು ಓಡಿಸಿತ್ತು. ಕಳೆದ ವರ್ಷ ಮೇ 1ರಿಂದ ಜುಲೈ 9ರವರೆಗೆ ಈ ರೈಲುಗಳನ್ನು ಓಡಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು