ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗವನ್ನು ರಚಿಸಲು ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ಲೋಕಸಭೆಗೆ ತಿಳಿಸಿದರು.

‘ಕೇಂದ್ರ ಸರ್ಕಾರಿ ನೌಕರರಿಗಾಗಿ ಸರ್ಕಾರವು ವೇತನ ಆಯೋಗ ರಚಿಸುವ ಪ್ರಸ್ತಾವ ಹೊಂದಿದ್ದರೆ, ಅದನ್ನು 2026ರ ಜನವರಿ 1ಕ್ಕೆ ಜಾರಿಗೆ ತರಬಹುದೇ?’ ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಸಚಿವ ಚೌದರಿ ಅವರು ಲಿಖಿತ ಉತ್ತರ ನೀಡಿದ್ದಾರೆ. ‘ಕೇಂದ್ರ ಸರ್ಕಾರಿ ನೌಕರರಿಗಾಗಿ 8ನೇ ಕೇಂದ್ರ ವೇತನ ಆಯೋಗ ರಚನೆ ಮಾಡುವ ಯಾವುದೇ ಪ್ರಸ್ತಾವನೆಯು ಸರ್ಕಾರದ ಪರಿಗಣನೆಯಲ್ಲಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಣದುಬ್ಬರದ ಕಾರಣದಿಂದಾಗಿ ನೌಕರರ ಸಂಬಳದ ನೈಜ ಮೌಲ್ಯದಲ್ಲಿನ ಕಡಿತವನ್ನು ಸರಿದೂಗಿಸಲು ತುಟ್ಟಿಭತ್ಯೆಗಳನ್ನು (ಡಿಎ) ಪಾವತಿಸಲಾಗುತ್ತದೆ. ಹಣದುಬ್ಬರದ ದರದ ಆಧಾರದ ಮೇಲೆ ಪ್ರತಿ ಆರು ತಿಂಗಳಿಗೊಮ್ಮೆ ಡಿಎ ದರವನ್ನು ಪರಿಷ್ಕರಿಸಲಾಗುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕೈಗಾರಿಕಾ ಕಾರ್ಮಿಕರಿಗಾಗಿ ಬಿಡುಗಡೆ ಮಾಡುವ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕದ ಮೂಲಕ ಅಳೆಯಲಾಗುವ ಹಣದುಬ್ಬರ ದರ ಡಿಎ ಹೆಚ್ಚಿಸಲಾಗುತ್ತದೆ ಎಂದು ಚೌದರಿ ವಿವರಿಸಿದರು

ಕೇಂದ್ರ ಸರ್ಕಾರವು 2014 ಫೆಬ್ರುವರಿಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿತ್ತು. ಸಮಿತಿಯ ಶಿಫಾರಸುಗಳು 2016ರ ಜನವರಿ 1ರಿಂದ ಜಾರಿಗೆ ಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.