ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಪಡಿತರ ವಿತರಣೆ ನವೆಂಬರ್ 30ರ ಬಳಿಕ ವಿಸ್ತರಿಸುವ ಪ್ರಸ್ತಾವ ಇಲ್ಲ: ಕೇಂದ್ರ

Last Updated 5 ನವೆಂಬರ್ 2021, 12:46 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (ಪಿಎಂಜಿಕೆಎವೈ)’ ಅಡಿಯಲ್ಲಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು ನವೆಂಬರ್ 30ರ ಬಳಿಕ ವಿಸ್ತರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಶುಕ್ರವಾರ ಹೇಳಿದ್ದಾರೆ.

ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ಮುಕ್ತ ಮಾರುಕಟ್ಟೆ ನೀತಿ (ಒಎಂಎಸ್‌ಎಸ್) ಅಡಿಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿತರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉಚಿತ ಪಡಿತರ ವಿತರಣೆ ಮುಂದುವರಿಸದಿರಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಕಾರಣ 2020ರ ಮಾರ್ಚ್‌ನಲ್ಲಿ ಉಚಿತ ಪಡಿತರ ವಿತರಣೆ ಘೋಷಿಸಲಾಗಿತ್ತು. ಆರಂಭದಲ್ಲಿ 2020ರ ಏಪ್ರಿಲ್‌ನಿಂದ ಜೂನ್‌ವರೆಗೆ ನಿಗದಿಪಡಿಸಿದ್ದ ಯೋಜನೆಯನ್ನು ಬಳಿಕ ವಿಸ್ತರಿಸಲಾಗಿತ್ತು.

ಪಿಎಂಜಿಕೆಎವೈ ಅಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ 80 ಕೋಟಿ ಪಡಿತರ ಕಾರ್ಡ್‌ದಾರರಿಗೆ ಸರ್ಕಾರವು ಉಚಿತವಾಗಿ ಪಡಿತರ ವಿತರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT