ಸೋಮವಾರ, ಡಿಸೆಂಬರ್ 5, 2022
22 °C

ಅಲ್ಪಸಂಖ್ಯಾತ ಸಚಿವಾಲಯ ರದ್ದು ಮಾಡುವುದಿಲ್ಲ: ಕೇಂದ್ರ ಸ್ಪಷ್ಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವುದಿಲ್ಲ. ಅಂತಹ ಯಾವ ಪ್ರಸ್ತಾವನೆಯೂ ನಮ್ಮ ಎದುರಿಲ್ಲ’ ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ಕೇಂದ್ರವು ಅಲ್ಪಸಂಖ್ಯಾತ ಸಚಿವಾಲಯವನ್ನು ರದ್ದುಗೊಳಿಸಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಜೊತೆ ವಿಲೀನಗೊಳಿಸಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. 

ಅಲ್ಪಸಂಖ್ಯಾತ ಸಚಿವಾಲಯವನ್ನು ರದ್ದುಗೊಳಿಸುವ ಪ್ರಸ್ತಾವನೆ ಕೇಂದ್ರದ ಎದುರಿಗಿಲ್ಲ ಎಂದು ಪಿಐಬಿ ಫ್ಯಾಕ್ಟ್‌ ಚೆಕ್‌ ಟ್ವೀಟ್‌ ಮಾಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಇದನ್ನು ಮರು ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು