ಕೋವಿಡ್: ಎರಡನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ.
ದೇಶದಾದ್ಯಂತ ಇದುವರೆಗೆ ಒಟ್ಟು 220.11 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.
ಚೀನಾ, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
No second Covid-19 booster dose required: Govt sources
Read @ANI Story | https://t.co/ifCGiO72fY
#COVID19 #boosterdose pic.twitter.com/1F1Eq01IsM— ANI Digital (@ani_digital) January 3, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.