ಮಹಾರಾಷ್ಟ್ರ: 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು

ಮುಂಬೈ: ‘ಕೋವಿಡ್–19 ಸಾಂಕ್ರಾಮಿಕ ರೋಗದ ಕಾರಣ ಮಹಾರಾಷ್ಟ್ರದಲ್ಲಿ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ’ ಎಂದು ಸಚಿವ ವಿಜಯ್ ವಾಡೆಟ್ಟಿವಾರ್ ಗುರುವಾರ ತಿಳಿಸಿದ್ದಾರೆ.
‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಹಿಂದೆಯೇ ತಮ್ಮ ಭಾಷಣದಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ಹೇಳಿದ್ದರು. ಗುರುವಾರ ಔಪಚಾರಿಕವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಸಿಬಿಎಸ್‌ಇನ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ನಿರ್ಧಾರ ಪ್ರಕಟಿಸಿದ ಎರಡು ದಿನಗಳ ಬಳಿಕ ಮಹಾರಾಷ್ಟ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.ಈ ಹಿಂದೆ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.