ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ತೀರ್ಪಿನ ಕುರಿತ ಮೇಲ್ಮನವಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್

Last Updated 16 ಮಾರ್ಚ್ 2022, 7:25 IST
ಅಕ್ಷರ ಗಾತ್ರ

ನವದೆಹಲಿ: ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೋಳಿ ಹಬ್ಬದ ಬಳಿಕ ಕೈಗೆತ್ತಿಕೊಳ್ಳುವುದಾಗಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ ಎಂದು ಮೂಲಗಳು ತಿಳಿಸಿವೆ.

‘ಸರ್ಕಾರಿ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂದು ಕೋರಲಾಗಿದ್ದ ಎಲ್ಲಾ ವೈಯಕ್ತಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ಅಲ್ಲದೆ, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT