ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಸಿಡಿ ಮೇಯರ್‌ ಆಯ್ಕೆ ಚುನಾವಣೆ: ಎಎಪಿ ವಾದ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Last Updated 17 ಫೆಬ್ರುವರಿ 2023, 12:51 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ(ಎಂಸಿಡಿ) ನಾಮನಿರ್ದೇಶಿತ ಸದಸ್ಯರು ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಈ ಮೂಲಕ ಆಮ್‌ ಆದ್ಮಿ ಪಾರ್ಟಿಯ (ಎಎಪಿ) ವಾದವನ್ನು ಪುರಸ್ಕರಿಸಿದೆ.

ಎಂಸಿಡಿಯ ಮುಂದಿನ ಸಭೆಯಲ್ಲೇ ಮೇಯರ್‌ ಆಯ್ಕೆಗಾಗಿ ಚುನಾವಣೆ ನಡೆಸಬೇಕು ಮತ್ತು ಮೇಯರ್‌ ಆಯ್ಕೆ ನಡೆದ ಬಳಿಕ ಉಪಮೇಯರ್‌ ಆಯ್ಕೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ನಿರ್ದೇಶನ ನೀಡಿದೆ.

‘ಮೇಯರ್‌ ಚುನಾವಣೆ ಮತ್ತು ಎಂಸಿಡಿಯ ಮುಂದಿನ ಸಭೆಯ ಸಂಬಂಧ 24 ಗಂಟೆಗಳೊಳಗೆ ನೋಟಿಸ್‌ ನೀಡಲಾಗುವುದು’ ಎಂದೂ ನ್ಯಾಯಪೀಠ ಹೇಳಿದೆ.

ಮೇಯರ್‌ ಚುನಾವಣೆ ಶೀಘ್ರ ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿ ಎಎಪಿಯ ಮೇಯರ್‌ ಅಭ್ಯರ್ಥಿ ಶೆಲ್ಲಿ ಒಬೆರಾಯ್‌ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT