ಶುಕ್ರವಾರ, ಅಕ್ಟೋಬರ್ 22, 2021
21 °C

ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ: ಜಾವೇದ್ ಅಖ್ತರ್ ವಿರುದ್ಧ ದೂರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್ಎಸ್‌) ವಿರುದ್ಧ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಾಲಿವುಡ್‌ನ ಗೀತೆ ರಚನೆಕಾರ ಜಾವೇದ್ ಅಖ್ತರ್ ಅವರ ವಿರುದ್ಧ ವಕೀಲರೊಬ್ಬರು ಇಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ವಕೀಲ ಸಂತೋಷ್ ದುಬೆ ಎನ್ನುವವರು ದೂರು ದಾಖಲಿಸಿದ್ದಾರೆ. ಜಾವೇದ್ ಅಖ್ತರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹೇಳಿಕೊಂಡು ದುಬೆ ಅವರು ವಿಡಿಯೊ ಮಾಡಿದ್ದಾರೆ. ಆದರೆ, ಜಾವೇದ್ ಅವರ ವಿರುದ್ಧ ಐಪಿಸಿ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ಎನ್‌ಸಿ (ನಾನ್ ಕಾಗ್ನಿಸಬಲ್ – ಗಂಭೀರ ಸ್ವರೂಪವಲ್ಲದ ಅಪರಾಧ) ದೂರು ಮಾತ್ರ ದಾಖಲಾಗಿದೆ’ ಎಂದು ಪುಲುಂಡ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಅವಿನಾಶ್ ಭಿಸೆ ಸ್ಪಷ್ಟಪಡಿಸಿದ್ದಾರೆ.

ವಾಹಿನಿಯೊಂದರ ಸಂದರ್ಶನವೊಂದರಲ್ಲಿ ಜಾವೇದ್ ಅಖ್ತರ್ ಅವರು ಆರ್‌ಎಸ್‌ಎಸ್‌ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಅವರಿಗೆ ವಕೀಲ ದುಬೆ ನೋಟಿಸ್ ನೀಡಿದ್ದರು. ಸಂದರ್ಶನದಲ್ಲಿ ಜಾವೇದ್ ಅವರು ತಾಲಿಬಾನ್ ಮತ್ತು ಹಿಂದೂ ತೀವ್ರಗಾಮಿಗಳ ನಡುವೆ ಇರುವ ಸಾಮ್ಯತೆಗಳ ಬಗ್ಗೆಯೂ ಮಾತನಾಡಿದ್ದರು. ಈ ಕುರಿತು ಅವರು ಕ್ಷಮೆಯಾಚಿಸುವಂತೆಯೂ ನೋಟಿಸ್‌ನಲ್ಲಿ ಒತ್ತಾಯಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು