ಶುಕ್ರವಾರ, ಡಿಸೆಂಬರ್ 9, 2022
21 °C

ದೆಹಲಿಯಲ್ಲಿ ದಲಿತ ಕಾರ್ಮಿಕರ ವೇತನ ಬಾಕಿ: ಕ್ರಮಕ್ಕೆ ಗವರ್ನರ್‌ ಸೂಚನೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಚರಂಡಿ ಸ್ವಚ್ಛಗೊಳಿಸುವ ಸಾವಿರಕ್ಕೂ ಹೆಚ್ಚು ದಲಿತ ಕಾರ್ಮಿಕರಿಗೆ ದೆಹಲಿ ಸರ್ಕಾರ ವೇತನ ಪಾವತಿಸಿಲ್ಲ ಎಂದು ಆರೋಪಿಸಿ ಭಾರತೀಯ ದಲಿತ ವಾಣಿಜ್ಯ ಹಾಗೂ ಕೈಗಾರಿಕಾ ಮಂಡಳಿ (ಡಿಐಸಿಸಿಐ) ದೂರು ನೀಡಿದೆ. ಈ ಬಗ್ಗೆ ಗಮನ ಹರಿಸುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಸೂಚಿಸಿದ್ದಾರೆ.

ದೆಹಲಿ ಜಲ ಮಂಡಳಿ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಒಳಚರಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರರಿಗೆ ಸರ್ಕಾರವು ₹ 16 ಕೋಟಿ ಹಣ ಪಾವತಿಸಬೇಕಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಕ್ಸೇನಾ, ಇದು 'ಗಂಭೀರವಾದ ವಿಚಾರ' ಎಂದಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ. ದೀಪಾವಳಿ ಹಬ್ಬಕ್ಕೂ ಮುನ್ನ ದಲಿತ ಕಾರ್ಮಿಕರ ಸಮಸ್ಯೆ ಬಗೆ ಹರಿಯಬೇಕು. ಹಬ್ಬದ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆ ಆಗಬಾರದು ಎಂದೂ ಸೂಚಿಸಿದ್ದಾರೆ ಎನ್ನಲಾಗಿದೆ.

ಡಿಐಸಿಸಿಐ ಅಧ್ಯಕ್ಷ ಮಿಲಿಂದ್‌ ಕಾಂಬ್ಳೆ ಅವರು ಸೆಪ್ಟೆಂಬರ್‌ 30ರಂದು ಸಕ್ಸೇನಾ ಅವರನ್ನು ಭೇಟಿಯಾಗಿದ್ದರು. ದಲಿತ ಕಾರ್ಮಿಕರ ವಿಚಾರದಲ್ಲಿ ದೆಹಲಿ ಸರ್ಕಾರವು ಉದಾಸೀನ ಧೋರಣೆ ತಳೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು