ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹200 ಕೋಟಿ ವಂಚನೆ ಪ್ರಕರಣ: ನಟಿ ನೋರಾ ಫತೇಹಿ ಇ.ಡಿ ವಿಚಾರಣೆ

Last Updated 2 ಡಿಸೆಂಬರ್ 2022, 9:12 IST
ಅಕ್ಷರ ಗಾತ್ರ

ನವದೆಹಲಿ: ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ₹200 ಕೋಟಿ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಹೇಳಿಕೆ ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷದ ನೋರಾ ಫತೇಹಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗಿದ್ದರು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ನೋರಾ ಫತೇಹಿ ಹೇಳಿಕೆಯನ್ನು ದಾಖಲಿಸಲಾಗಿದೆ.

ಈಗಾಗಲೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಹೈ ಪ್ರೊಫೈಲ್ ವ್ಯಕ್ತಿಗಳನ್ನು ವಂಚಿಸಿ ಬಾಲಿವುಡ್ ನಟಿಯರಿಗೆ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡಲು ಚಂದ್ರಶೇಖರ್ ಅಕ್ರಮ ಹಣವನ್ನು ಬಳಕೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ಬಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT