ಶನಿವಾರ, ಸೆಪ್ಟೆಂಬರ್ 18, 2021
28 °C

ಈಶಾನ್ಯ ದೆಹಲಿ ಗಲಭೆ: ಒಂದೇ ಪ್ರಕರಣದ 4 ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ ವರ್ಷ ಈಶಾನ್ಯ ದೆಹಲಿಯ ಗಲಭೆಯ ವೇಳೆ ನಡೆದ ಲೂಟಿ ಮತ್ತು ಕಾಂಪೌಂಡ್‌ಗೆ ಬೆಂಕಿ ಹಚ್ಚಿದ ಆರೋಪದಡಿ ದಾಖಲಾಗಿದ್ದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ದೆಹಲಿ ಹೈಕೋರ್ಟ್ ‘ಒಂದೇ ಅಪರಾಧಕ್ಕೆ ಎರಡನೇ ಎಫ್‌ಐಆರ್ ದಾಖಲಿಸುವುದಾಗಲೀ, ಅಪರಾಧದ ಬಗ್ಗೆ ಹೊಸದಾಗಿ ತನಿಖೆ ನಡೆಸುವುದಾಗಲೀ ಸಾಧ್ಯವಿಲ್ಲ‘ ಎಂದು ಹೇಳಿದೆ.

‘ಒಂದೇ ಘಟನೆಗೆ ಐದು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲು ಸಾಧ್ಯವಿಲ್ಲ‘ ಎಂದು ಹೇಳಿರುವ ದೆಹಲಿ ಹೈಕೋರ್ಟ್‌, ಹಾಗೆ ಮಾಡುವುದು ಸುಪ್ರೀಂ ಕೋರ್ಟ್‌ನ ಕಾನೂನುಗಳಿಗೆ ವಿರುದ್ಧವಾಗುತ್ತದೆ ಎಂದು  ಹೇಳಿದೆ.

ಜಾಫ್ಫರಾಬಾದ್‌ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಐದು ಎಫ್‌ಐಆರ್‌ ದಾಖಲಾಗಿತ್ತು. ಒಂದು ಎಫ್‌ಐಆರ್ ಅನ್ನು ಮಾತ್ರ ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿತು.

ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್,  ‘ಇಂಥ ಪ್ರಕರಣದಲ್ಲಿ ಘಟನೆಗಳು ಬೇರೆ ಬೇರೆ ಅಥವಾ ಅಪರಾಧಗಳು ವಿಭಿನ್ನವಾಗಿವೆ‘ ಎಂದು ಹೇಳಲು ಸಾಧ್ಯವಿಲ್ಲ. ಮೊದಲೇ ಹೇಳಿದಂತೆ, ಎಲ್ಲ ಎಫ್‌ಐಆರ್‌ಗಳಲ್ಲಿ ಆರೋಪಿಗಳು ಮತ್ತು ಆರೋಪ ಒಂದೇ ರೀತಿ ಇದೆ ಎಂದು ತೋರಿಸುತ್ತದೆ. ಆದರೆ, ಆರೋಪಿಯ ವಿರುದ್ಧ ಯಾವುದೇ ಸಾಕ್ಷ್ಯಗಳು ಕಂಡುಬಂದಲ್ಲಿ ಅದನ್ನು ಎಫ್‌ಐಆರ್‌ನಲ್ಲಿ ದಾಖಲಿಸಬಹುದು‘ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು