ಬುಧವಾರ, ಸೆಪ್ಟೆಂಬರ್ 22, 2021
23 °C

ಈಶಾನ್ಯ ಭಾರತ ಸದಾ ಒಂದಾಗಿರುತ್ತದೆ: ಮಿಜೋರಾಂ ಸಿ.ಎಂ.

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಐಜ್ವಾಲ್‌: ‘ಈಶಾನ್ಯ ಭಾರತ ಸದಾ ಒಂದಾಗಿರುತ್ತದೆ’ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಮ್‌ತಂಗಾ ಟ್ವೀಟ್‌ ಮಾಡಿದ್ದಾರೆ.

ಅಸ್ಸಾಂನ ಕಚಾರ್‌ ಜಿಲ್ಲೆಯ ಗಡಿಭಾಗದಲ್ಲಿರುವ ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಬೇರೆ ಪ್ರದೇಶಗಳ ಜನರ ಓಡಾಟಕ್ಕೆ ಯಾವುದೇ ನಿರ್ಬಂಧ ಹೇರಲಾಗಿಲ್ಲ ಎಂದು ಹೇಳಿರುವ ಅಧಿಸೂಚನೆಯೊಂದನ್ನು ಜೋರಾಮ್‌ಥಾಂಗಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಸ್ಸಾಂ–ಮಿಜೋರಾಂ ಹಿಂಸಾಚಾರದ ಹಿನ್ನೆಲೆಯಲ್ಲಿ ಮಿಜೋರಾಂಗೆ ಪ್ರಯಾಣಿಸದಂತೆ ತನ್ನ ರಾಜ್ಯದ ನಿವಾಸಿಗಳಿಗೆ ಅಸ್ಸಾಂ ಸರ್ಕಾರ ಸೂಚಿಸಿತ್ತು. ಅಲ್ಲದೆ ಜಾಗರೂಕರಾಗಿರುವಂತೆಯೂ ಹೇಳಿತ್ತು. ಇದರ ಬೆನ್ನಲ್ಲೇ ಮಿಜೋರಾಂ ಮುಖ್ಯಮಂತ್ರಿಗಳು ಈ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು