ಸೋಮವಾರ, ಮಾರ್ಚ್ 1, 2021
27 °C
ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಯುಪಿಎಸ್‌ಸಿ ಪರೀಕ್ಷೆ: ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ‌: ‘ಕೋವಿಡ್‌ 19‘ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.‌

ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು ಅವರು ಈ ಕುರಿತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದರು. ಈ ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೃಷ್ಣ ಮುರೈ ಅವರೂ ಇದ್ದಾರೆ.

‘ಕೋವಿಡ್‌ 19‘ ಸಾಂಕ್ರಾಮಿಕದಿಂದಾಗಿ 2020ರ ಯುಪಿಎಸ್‌ಸಿ ಪರೀಕ್ಷೆ ತಪ್ಪಿಸಿಕೊಂಡ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಗುರುವಾರ ರಾತ್ರಿ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು‘ ಎಂದು ರಾಜು ಅವರು ಪೀಠಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: 

ಪರೀಕ್ಷೆಗೆ ಮತ್ತೊಂದು ಅವಕಾಶ ನೀಡುವಂತೆ ಕೋರಿ ನಾಗರಿಕ ಸೇವೆಗಳ ಆಕಾಕ್ಷಿ ರಚನಾ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಜ.25ಕ್ಕೆ ಮುಂದೂಡಿದೆ. ಈ ಅವಧಿಯಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಈ ಹಿಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಇಂಥ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಇನ್ನೂ ಒಂದು ಅವಕಾಶವನ್ನು ನೀಡುವ ವಿಷಯವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು