ಶುಕ್ರವಾರ, ಅಕ್ಟೋಬರ್ 23, 2020
21 °C

ಆನ್‌ಲೈನ್‌ ಶಿಕ್ಷಣ: ಬಡ ಮಕ್ಕಳಿಗೆ ಅಗತ್ಯ ಉಪಕರಣ ಒದಗಿಸಲು ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಡ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣಕ್ಕೆ ಅನುಕೂಲವಾಗುವಂತೆ ಖಾಸಗಿ ಮತ್ತು ಕೇಂದ್ರೀಯ ವಿದ್ಯಾಲಯದಂತಹ ಸರ್ಕಾರಿ ಶಾಲೆಗಳು ಸ್ಮಾರ್ಟ್‌ಫೋನ್‌ ಮತ್ತು ಇಂಟರ್ನೆಟ್‌ ಸೇವೆಯನ್ನು ಒದಗಿಸಬೇಕು ಎಂದು ದೆಹಲಿ ಹೈಕೋರ್ಟ್‌ ಸೂಚಿಸಿದೆ. 

ಈ ರೀತಿಯ ಸೌಲಭ್ಯ ಕಲ್ಪಿಸದೇ ಇರುವುದರಿಂದ ಮಕ್ಕಳ ನಡುವೆ ತಾರತಮ್ಯ ಮತ್ತು ‘ಡಿಜಿಟಲ್ ಭೇದಭಾವ’ ಸೃಷ್ಟಿಯಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು ಸಂಜೀವ್ ನರುಲಾ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸ್ಮಾರ್ಟ್‌ಫೋನ್‌ಗಳನ್ನು ಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳು ಇತರರೊಂದಿಗೆ ತಮ್ಮನ್ನು ಹೋಲಿಸಿಕೊಂಡು ಕೀಳರಿಮೆ ಒಳಗಾಗಬಹುದು. ಇದರಿಂದ ಅವರ ಮನಸಿಗೆ ಘಾಸಿ ಉಂಟಾಗುವ ಸಾಧ್ಯತೆಯಿದೆ ಎಂದು ಕೋರ್ಟ್‌ ತಿಳಿಸಿದೆ. 

ಅಶಕ್ತರು, ಆರ್ಥಿಕವಾಗಿ ಹಿಂದುಳಿದವರಿಗೆ ಆನ್‌ಲೈನ್‌ ತರಗತಿ ಪ್ರವೇಶ ಸಾಧ್ಯವಾಗುತ್ತಿದೆಯೇ ಎಂಬುದನ್ನು ಶಾಲೆಗಳು ಖಚಿತಪಡಿಸಿಕೊಳ್ಳಬೇಕು. ಅಗತ್ಯ ಉಪಕರಣ ನೀಡದೇ ಇರುವುದರಿಂದ ಮಕ್ಕಳ ನಡುವೆ ಆರ್ಥಿಕ ತಡೆಗೋಡೆ ನಿರ್ಮಾಣವಾಗುವುದರ ಜೊತೆಗೆ ಶೈಕ್ಷಣಿಕ ಪ್ರಗತಿಗೂ ತೊಡಕು ಉಂಟಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ. 

ಆನ್‌ಲೈನ್‌ ಶಿಕ್ಷಣದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಮಕ್ಕಳಿಗೆ ತರಗತಿಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವಂತಹ ಉಪಕರಣ ಒದಗಿಸಬೇಕು ಎಂದು ಜಸ್ಟೀ‌ಸ್‌ ಫಾರ್ ಆಲ್‌ ಎಂಬ ಸ್ವಯಂ ಸೇವಾ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು