ಶನಿವಾರ, ಮೇ 15, 2021
24 °C
ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಸಿಂಗ್‌ ಹೇಳಿಕೆ

ಚೀನಾ ಹವಣಿಕೆ, ಆಶ್ಚರ್ಯಪಡುವಂಥದ್ದು ಇಲ್ಲ: ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಸಿಂಗ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾ ಅತಿಕ್ರಮಣ ನಡೆಸುವ ಮೂಲಕ ಇಲ್ಲಿನ ಸಂಪನ್ಮೂಲವನ್ನು ಕೊಳ್ಳೆ ಹೊಡೆಯಲು ಹವಣಿಸುತ್ತಿರುವುದರಲ್ಲಿ ಆಶ್ಚರ್ಯ ಪಡುವಂಥದ್ದು ಏನೂ ಇಲ್ಲ ಎಂದು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಕರಂಬೀರ್‌ ಸಿಂಗ್‌ ಬುಧವಾರ ಹೇಳಿದರು.

ಚೀನಾ ಹೊಂದಲು ಬಯಸುತ್ತಿರುವ ಇಂಧನ ಮೂಲ, ಮಾರುಕಟ್ಟೆ ಹಾಗೂ ಇತರ ಸಂಪನ್ಮೂಲಗಳು ಹಿಂದೂಮಹಾಸಾಗರ ಪ್ರದೇಶದಲ್ಲಿಯೇ ಇರುವುದು ಇದಕ್ಕೆ ಕಾರಣ ಎಂದರು.

‘ರೈಸಿನಾ ಡೈಲಾಗ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಚೀನಾದ ಇಂಥ ಪ್ರಯತ್ನವನ್ನು ಪ್ರತಿರೋಧಿಸಿ, ದೇಶದ ಭದ್ರತೆ ಹಾಗೂ ಆ ಪ್ರದೇಶದಲ್ಲಿ ಸ್ಥಿರತೆ ಕಾಪಾಡಲು ನೌಕಾಪಡೆ ಶಕ್ತವಾಗಿದೆ. ಜಾಗತಿಕ ಸನ್ನಿವೇಶದಲ್ಲಿ ಹೆಚ್ಚು ಆತ್ಮವಿಶ್ವಾಸ ಹೊಂದಿರುವ ರಾಷ್ಟ್ರವಾಗಿ ಭಾರತ ಹೊರಹೊಮ್ಮುತ್ತಿದೆ’ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು